Site icon PowerTV

ರಿಷಭ್ ಶೆಟ್ಟಿ ನಟನೆಯ ‘ಸಿಂಗಾರ ಸಿರಿಯೆ’ ಹಾಡು ಮೆಚ್ಚಿದ ಅಭಿಮಾನಿಗಳು

ಬೆಂಗಳೂರು : ಹೊಂಬಾಳೆ ಫಿಲ್ಮ್ಸ್​​​​​ ಮೂಲಕ ವಿಜಯ್ ಕಿರಗಂದೂರು ಅವರು ನಿರ್ಮಿಸಿರುವ ಹಾಗೂ ರಿಷಭ್ ಶೆಟ್ಟಿ ನಾಯಕರಾಗಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಸಿನಿಮಾದ ‘ಸಿಂಗಾರ ಸಿರಿಯೆ’ ಎಂಬ ಅದ್ಭುತ ಹಾಡನ್ನ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸುಸಂದರ್ಭದಲ್ಲಿ ಬಿಡುಗಡೆ ಮಾಡಲಾಗಿದೆ.

ಈ ಹಾಡಿನಲ್ಲಿ ರಿಷಭ್ ಕಂಡು ಅಭಿಮಾನಿಗಳು ಮಸ್ತ್ ಎಂದಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡಿ, ಪ್ರಮೋದ್ ಮರವಂತೆ ಬರೆದಿರುವ ಸಿಂಗಾರ ಸಿರಿಯೆ ಹಾಡಿನಲ್ಲಿ ಕರುನಾಡ ಸಂಸ್ಕ್ರತಿಯ ಭವ್ಯ ಪರಂಪರೆಯನ್ನು ಮನಮುಟ್ಟುವಂತೆ ನಿರ್ದೇಶಕ ರಿಷಬ್ ಶೆಟ್ಟಿ ತೋರಿಸಿದ್ದಾರೆ.

ಹಲವು ಜನಪದ ನೃತ್ಯಗಳ ಹಿನ್ನೆಲೆಯಲ್ಲಿ ನಾಯಕ, ನಾಯಕಿಗೆ ಪ್ರೇಮದ ವಿಷಯ ತಿಳಿಸುವ ರೀತಿ ಈ ಹಾಡಿನಲ್ಲಿ ಸೊಗಸಾಗಿ ಮೂಡಿಬಂದಿದೆ. ಅಲ್ಲದೇ ಹಾಡಿನ ಕಾನ್ಸೆಪ್ಟ್ ಕೂಡ ನೋಡುಗರಿಗೆ ಹಿಡಿಸಿದೆ. ಹೀಗಾಗಿ ಈ ಗೀತೆಯನ್ನು ಅಭಿಮಾನಿಗಳು ಬಹುವಾಗಿ ಮೆಚ್ಚಿಕೊಂಡಿದ್ದಾರೆ.

Exit mobile version