Site icon PowerTV

ಪೊಲೀಸರ ಆತ್ಮ ರಕ್ಷಣೆಗಾಗಿ ಆರೋಪಿ ಕಾಲಿಗೆ ಫೈರ್: ಆರಗ ಜ್ಞಾನೇಂದ್ರ

ಶಿವಮೊಗ್ಗ:ಚಾಕು ಇರಿತದಿಂದಾಗಿ ಯುವಕನಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡ ಯುವಕನ ಆರೋಗ್ಯ ಸುಧಾರಿಸುತ್ತಿದೆ. ಈಗಾಗಲೇ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಗೃಹಮಂತ್ರಿ ಆರಗ ಜ್ಞಾನೇಂದ್ರ ಅವರು ಹೇಳಿದ್ದಾರೆ.

ರಾಜ್ಯ ಸರ್ಕಾರ ಬಗ್ಗೆ ಹಾಗೂ ನನ್ನ ವಿರುದ್ಧ ಘೋಷಣೆ ಕೂಗುತ್ತಾರೆ. ಯಾರ್ ಯಾರದೋ ಸಿಟ್ಟು ನನ್ನ ಮೇಲೆ ಹಾಕುತ್ತಾರೆ ಎಂದರು.

ಶಿವಮೊಗ್ಗದಲ್ಲಿ ಚಾಕು ಇರಿತದ ಆರೋಪಿಗಳನ್ನು ಬಂಧಿಸಲು ಪೊಲೀಸರು ತೆರಳಿದ್ದರು. ಈ ವೇಳೆ ಹಲ್ಲೆ ಮಾಡಲು ಒಬ್ಬ ಆರೋಪಿ ಪ್ರಯತ್ನಿಸಿದ್ದಾನೆ. ಪೊಲೀಸರು ಆತ್ಮ ರಕ್ಷಣೆಗಾಗಿ ಆರೋಪಿ ಕಾಲಿಗೆ ಫೈರ್ ಮಾಡಿದ್ದಾರೆ. ಈಗಾಗಲೇ ಆರೋಪಿಗಳನ್ನು ಬಂಧಿಸಲಾಗಿದೆ.

ಇನ್ನು ಭದ್ರಾವತಿ ಮತ್ತು ಶಿವಮೊಗ್ಗದಲ್ಲಿ 144 ಸೆಕ್ಷನ್ ಹಾಕಲಾಗಿದೆ. ಆರ್.ಎ.ಎಫ್. ಮತ್ತು ಕೆ.ಎಸ್.ಆರ್.ಪಿ ತುಕಡಿ ಕರೆಸಲಾಗಿದೆ. ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ಪರಿಸ್ಥಿತಿ ಕಂಟ್ರೋಲ್ ನಲ್ಲಿದೆ. ಎಡಿಜಿಪಿ ಮತ್ತು ಎಸ್.ಪಿ. ಅವರು ಪರಿಸ್ಥಿತಿ ತಹಬದಿಗೆ ತರುತ್ತಿದ್ದಾರೆ ಎಂದು ಗೃಹ ಸಚಿವರು ತಿಳಿಸಿದರು.

Exit mobile version