Saturday, August 23, 2025
Google search engine
HomeUncategorizedಆಲಮಟ್ಟಿ ಜಲಾಶಯ ಅಧಿಕಾರಿಗಳ ಕಾರ್ಯಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಪ್ರಶಂಸೆ

ಆಲಮಟ್ಟಿ ಜಲಾಶಯ ಅಧಿಕಾರಿಗಳ ಕಾರ್ಯಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಪ್ರಶಂಸೆ

ಬೆಂಗಳೂರು: ಭಾರೀ ಮಳೆಯಾದರೂ ಹೆಚ್ಚಿನ ಅನಾಹುತಗಳು ಸಂಭವಿಸದಂತೆ ಆಲಮಟ್ಟಿ ಜಲಾಶಯದಿಂದ ನೀರು ಬಿಡುಗಡೆ ವಿಷಯದಲ್ಲಿ ಕರ್ನಾಟಕದ ಅಧಿಕಾರಿಗಳು ಚೆನ್ನಾಗಿ ಕೆಲಸ ಮಾಡಿದ್ದಾರೆ ಎಂದು ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ನೆರೆ ಹಾವಳಿಗೆ ಕರ್ನಾಟಕದ ಆಲಮಟ್ಟಿ ಜಲಾಶಯದಲ್ಲಿ ನೀರು ನಿರ್ವಹಣೆಯೇ ಕಾರಣ ಎಂದು ಮಹಾರಾಷ್ಟ್ರದಲ್ಲಿದ್ದ ಹಿಂದಿನ ಸರ್ಕಾರಗಳು ಮಾಡುತ್ತಿದ್ದ ಆರೋಪಗಳಿಗೆ ವ್ಯತಿರಿಕ್ತವಾಗಿ ಮಹಾರಾಷ್ಟ್ರದ ಸಿಎಂ ಏಕನಾಥ ಶಿಂಧೆ ಹೇಳಿಕೆ ನೀಡಿರುವುದು ಮಹತ್ವ ಪಡೆದುಕೊಂಡಿದೆ.

ಮಹಾರಾಷ್ಟ್ರದ ಸಾಂಗ್ಲಿ, ಕೊಲ್ಹಾಪುರ ಮತ್ತಿತರ ಕಡೆಗಳಲ್ಲಿ ಉಂಟಾಗುವ ಪ್ರವಾಹಕ್ಕೆ ಆಲಮಟ್ಟಿಯಿಂದ ಬಿಡಲಾಗುವ ನೀರು ಕಾರಣವಲ್ಲ ಎಂದು ಮಹಾರಾಷ್ಟ್ರ ಸರ್ಕಾರದ ನೀರಾವರಿ ತಜ್ಞರ ನೇತೃತ್ವದ ಸಮಿತಿ ಕಳೆದ ವರ್ಷವಷ್ಟೇ ವರದಿ ನೀಡಿತ್ತು. ಈಗ ಅಲ್ಲಿನ ಮುಖ್ಯಮಂತ್ರಿಗಳೇ ಆಲಮಟ್ಟಿ ಅಧಿಕಾರಿಗಳ ಕಾರ್ಯನಿರ್ವಹಣೆ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದು ಗಮನಾರ್ಹವಾಗಿದೆ.

RELATED ARTICLES
- Advertisment -
Google search engine

Most Popular

Recent Comments