Site icon PowerTV

ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು : ಕೊಡಗು ಪ್ರವಾಸಕ್ಕೆ ತೆರಳಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದ ಘಟನೆಯನ್ನು ಖಂಡಿಸಿ ಫ್ರೀಡಂ ಪಾರ್ಕ್​ನಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.

ಬೆಳಗ್ಗೆ ಫ್ರೀಡಂ ಪಾರ್ಕ್​ನಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್, ಶಾಸಕರಾದ ರಾಮಲಿಂಗಾ ರೆಡ್ಡಿ, ಸಲೀಂ ಅಹ್ಮದ್, ನಜೀರ್ ಅಹ್ಮದ್, ಮಾಜಿ ಸಂಸದ ಉಗ್ರಪ್ಪ, ಎಚ್. ಎಂ ರೇವಣ್ಣ, ಶಾಸಕ ಬೈರತಿ ಸುರೇಶ್, ರಿಜ್ವಾನ್ ಅರ್ಷದ್ ಸೇರಿದಂತೆ ಹಲವು ಮುಖಂಡರು ಕಾರ್ಯಕರ್ತರು ಭಾಗಿಯಾಗಿದ್ದಾರೆ.

ಅದಲ್ಲದೇ, ಪ್ರತಿಭಟನೆಯಲ್ಲಿ ಬಿಜೆಪಿ ವಿರುದ್ಧ ಘೋಷಣೆ ಕೂಗಿದ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಪ್ರದರ್ಶನ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಮಾತನಾಡಿದ ಮಾಜಿ ಸಂಸದ ವಿ.ಎಸ್ ಉಗ್ರಪ್ಪ, ರಾಜ್ಯದಲ್ಲಿ ರಾಷ್ಟ್ರದಲ್ಲಿ ಸರ್ವಾಧಿಕಾರಿ ಪ್ರವೃತ್ತಿ ಇದೆ. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದಮನ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Exit mobile version