Site icon PowerTV

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌.!

ಕೊಡಗು: ಜಿಲ್ಲೆಯ ಕುಶಾಲನಗದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ.

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ತೂರಿದ್ದ ವ್ಯಕ್ತಿ ಸಂಪತ್ ಎಂದು ತಿಳಿದು ಬಂದಿದ್ದು, ಆರೋಪಿ ಸಂಪತ್ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಜೊತೆಗೆ ಇರೋ ಪೋಟೋ ವೈರಲ್ ಆಗಿದ್ದು ಒಂದು ಕಡೆಯಾದರೆ, ಮಡಿಕೇರಿ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಜೊತೆ ಕೇಸರಿ ಶಾಲು ಹಾಕಿ ಗುರುತಿಸಿಕೊಂಡಿದ್ದಾನೆ. ಇನ್ನೊಂದು ಕಡೆ ಆರೋಪಿ ಸಂಪತ್ ಕಾಂಗ್ರೆಸ್ ಭಾವುಟ ಹಿಡಿದುಕೊಂಡಿರುವ ಪೊಟೋ ವೈರಲ್ ಆಗಿದೆ.

ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಬಗ್ಗೆ ಈಗಾಗಲೇ ಸಂಪತ್ ಸೇರಿ 9 ಮಂದಿ ವಿರುದ್ಧ ಕುಶಾಲನಗರ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

Exit mobile version