Site icon PowerTV

ವಿಜಯಪುರದಲ್ಲಿ ಮತ್ತೆ ನಡುಗಿದ ಭೂಮಿ..!

ವಿಜಯಪುರ:  ‌ಜಿಲ್ಲೆಯಲ್ಲಿ ಮತ್ತೆ ಭೂಮಿ ನಡುಗಿದೆ. ನಿನ್ನೆ ರಾತ್ರಿ 8.16 ಕ್ಕೆ ಭೂಕಂಪದ ಅನುಭವಾಗಿದೆ.

ನಗರದ ವಿವಿಧ ಭಾಗಗಳಲ್ಲಿ ಭೂಮಿ ನಡುಗಿದ್ದು, ಯಾವುದೇ ಸಾವು ನೋವಿನ ವರದಿಯಾಗಿಲ್ಲ. ವಿಜಯಪುರ ‌ಜಿಲ್ಲೆಯ ತಿಕೋಟಾ, ಬಬಲೇಶ್ವರ, ಬಸವನಬಾಗೇವಾಡಿ ತಾಲೂಕುಗಳು ಸೇರಿದಂತೆ ಇತರೆ ಭಾಗಗಳಲ್ಲೂ ಭೂಮಿ ನಡುಗಿದ ಅನುಭವವಾಗಿದೆ. ಭೂಕಂಪನ ಅನುಭವವಾಗುತ್ತಿದ್ದಂತೆ ಜನರು ಆತಂಕದಿಂದ ಮನೆಯಿಂದ ಆಚೆ ಬಂದಿದ್ದಾರೆ. ಮೇಲಿಂದ ಮೇಲೆ ಭೂಕಂಪನ ಆಗುತ್ತಿರೋದಕ್ಕೆ ಜನ ಭಯಭೀತರಾಗಿದ್ರು. ರಿಕ್ಟರ್ ಮಾಪಕದಲ್ಲಿ 3.3 ರಷ್ಟು ತೀವ್ರತೆ ದಾಖಲಾಗಿದ್ದು, ಆಸ್ತಿ-ಪಾಸ್ತಿ ನಷ್ಟದ ಬಗ್ಗೆಯೂ ವರದಿಯಾಗಿಲ್ಲ.

Exit mobile version