Site icon PowerTV

ಸಿದ್ದರಾಮಯ್ಯ ಪಶ್ಚಾತ್ತಾಪದ ಮಾತು ಯಾರೂ ನಿರೀಕ್ಷಿಸುವುದಿಲ್ಲ: ಬಿ.ವೈ ವಿಜಯೇಂದ್ರ

ಬೆಂಗಳೂರು: ರಂಭಾಪುರ ಸ್ವಾಮೀಗಳ ಹತ್ತಿರ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಲಿಂಗಾಯತ ಪ್ರತ್ಯೇಕ ಧರ್ಮ ಬಗ್ಗೆ ಪಶ್ಚಾತ್ತಾಪ ಬಗ್ಗೆ ಟ್ವೀಟ್ ಮೂಲಕ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನಿಸಿದ್ದಾರೆ.

ತಮ್ಮ ಅವಧಿಯ ಜನ ವಿರೋಧಿ ಆಡಳಿತ ಹಾಗೂ ರಾಜಕಾರಣದ ವೈಫಲ್ಯ ಮುಚ್ಚಿ ಕೊಳ್ಳಲು ಧರ್ಮ ರಾಜಕಾರಣಕ್ಕೆ ಕೈ ಹಾಕಿ ಮುಖಭಂಗ ಅನುಭವಿಸಿ ಸಿದ್ದರಾಮಯ್ಯ ಅವರು ತಕ್ಕ ಬೆಲೆ ತೆತ್ತಿದ್ದಾರೆ. 

ಸಿದ್ದರಾಮಯ್ಯ ಅವರೇ ಪಶ್ಚಾತ್ತಾಪದ ಮಾತು ನಿಮ್ಮಿಂದ ಯಾರೂ ನಿರೀಕ್ಷಿಸುವುದಿಲ್ಲ. ಆದರೆ, ಧರ್ಮಗುರುಗಳ ದರ್ಶನಕ್ಕೆ ತೆರಳಿ ಅಲ್ಲಿಯೂ ವಿತಂಡ ವಿವಾದ ಸೃಷ್ಟಿಸುವುದು ಎಷ್ಟು ಸರಿಯೇ ಎಂದಿದ್ದಾರೆ.

ಒಂದುಕಡೆ ಧರ್ಮ ಒಡೆಯುವ, ಮತ್ತೊಂದು ಕಡೆ ವೀರ್ ಸಾವರ್ಕರ್ ರಂತಹ ಸ್ವಾತಂತ್ರ್ಯ ಸೇನಾನಿಗಳನ್ನು ಅವಹೇಳನ ಮಾಡುವ ಮೂಲಕ ಮತಾಂಧರನ್ನು ಎತ್ತಿ ಕಟ್ಟುವ ನಿಮ್ಮ ರಾಜಕೀಯ ನಡೆ ರಾಜ್ಯದ ಜನತೆ ಗಮನಿಸುತ್ತಿದ್ದಾರೆ. ಧರ್ಮರಾಜಕಾರಣದ ಬಿಸಿ ಅನುಭವಿಸಿಯೂ ಮತ್ತದೇ ಹಾದಿಯಲ್ಲಿ ಸಾಗಿರುವ ನಿಮಗಾಗಿ ಬಹುದೊಡ್ಡ ಕಂದಕ ಕಾಯುತ್ತಿದೆ ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Exit mobile version