Site icon PowerTV

‘ಮಾಂಸ ತಿಂದು ಹೋಗ್ತೇನೆ ಅನ್ನೋದು ಭಂಡತನ’ : ಬಿ.ವೈ ವಿಜಯೇಂದ್ರ

ಗದಗ : ಜಿಲ್ಲೆ ಲಕ್ಷ್ಮೇಶ್ವರದ ಮುಕ್ತಿಮಂದಿರದಲ್ಲಿ ಮಾತನಾಡಿದ ಬಿ.ವೈ ವಿಜಯೇಂದ್ರ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮಾಂಸ ತಿಂದು ದೇವಸ್ಥಾನಕ್ಕೆ ಹೋದ್ರೆ ತಪ್ಪೆನು ಎಂಬ ಈ ಭಂಡತನ ಯಾರೂ ಸಹ ಒಪ್ಪುವುದಿಲ್ಲ. ನಮ್ಮ ನಾಡಿಗೆ ಒಂದು ಸಂಸ್ಕೃತಿ, ಪರಂಪರೆ, ಧಾರ್ಮಿಕ ಶ್ರದ್ಧೆ ಇದೆ. ಇದೆಲ್ಲವನ್ನು ನಂಬಿ ಜೀವನ ಸಾಗಿಸುವ ಅಪಾರ ಜನರು, ಭಕ್ತರು ಇದ್ದಾರೆ. ಆದರೆ ಈ ರೀತಿ ಬಹಿರಂಗವಾಗಿ ಹೇಳಿಕೆ ನೀಡುವುದರಿಂದ ಇತರರ ಮನಸ್ಸಿಗೆ ಘಾಸಿಯನ್ನುಂಟು ಮಾಡಬಾರದು. ನಮ್ಮ ನಡುವಳಿಕೆ ಇತರರಿಗೆ ಮಾದರಿಯಾಗಬೇಕು ಎಂದಿದ್ದಾರೆ.

ಕಾಂಗ್ರೆಸ್‌ನವರು ಅಧಿಕಾರಕ್ಕೆ ಬಂದೇ ಬಿಟ್ಟಿದೇವೆ ಎನ್ನುವ ಅತಿಯಾದ ಆತ್ಮವಿಶ್ವಾಸದಲ್ಲಿ ಮುನ್ನುಗ್ಗುತ್ತಿದ್ದಾರೆ. ಬಿಎಸ್‌ವೈಗೆ ಉನ್ನತ ಸ್ಥಾನ ಸಿಕ್ಕಿದ್ದು, ಕಾಂಗ್ರೆಸ್‌ಗೆ ಆಘಾತ ಆಗಿದೆ. ವಿಜಯದ ನಾಗಾಲೋಟಕ್ಕೆ ಯಡಿಯೂರಪ್ಪ ಅಡ್ಡಿಯಾಗುತ್ತಾರಲ್ಲ ಅಂತ ಮಾಜಿ ಹಾಗೂ ಭಾವಿ ಮುಖ್ಯಮಂತ್ರಿ ಅಭ್ಯರ್ಥಿಗಳ ಕನಸಿಗೆ ಭಂಗ ಆಗಿದೆ. ಸೋಲಿನ ಭಯಕ್ಕೆ ಸಹಜವಾಗಿ ಮಠ, ದೇವಸ್ಥಾನಕ್ಕೆ ಹೋಗುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

Exit mobile version