Site icon PowerTV

ಅರಣ್ಯಾಧಿಕಾರಿಗಳಿಗೆ ತಲೆನೋವಾದ ಪುಂಡಾನೆ

ಚಿಕ್ಕಮಗಳೂರು : ಪುಂಡ ಒಂಟಿ ಸಲಗವೊಂದು ಅರಣ್ಯಾಧಿಕಾರಿಗಳು ಹೈರಾಣುಗುವಂತೆ ಹಿಂಸೆ ಕೊಡುತ್ತಿದ್ದು, ಒಂಟಿ ಸಲಗವನ್ನ ಸೆರೆ ಹಿಡಿಯಲು ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಜಯಪುರ ಸಮೀಪದ ಮೇಗುಂದಾ ಹೋಬಳಿಯ ಸುತ್ತಮುತ್ತ ಕಳೆದ ನಾಲ್ಕೈದು ತಿಂಗಳಿಂದ ಪುಂಡಾನೆ ಕಾಟ ಕೊಡುತ್ತಿತ್ತು. ಪುಂಡಾನೆಯನ್ನ ಹಿಡಿಯಲು ಶಿವಮೊಗ್ಗದಿಂದ ಸಾಕಾನೆಗಳನ್ನ ಕರೆಸಿದ್ದರು. ಮೂರು ದಿನದಿಂದ ಕಾರ್ಯಾಚರಣೆ ನಡೆಸಿದರು ಒಂಟಿ ಸಲಗ ಎಲ್ಲರಿಗೂ ಚಳ್ಳೆಹಣ್ಣು ತಿನ್ನಿಸುತ್ತಿದೆ. 11 ಮಾವುತರು, ಐದು ಸಾಕಾನೆಗಳು, ಅಧಿಕಾರಿಗಳು ಸೇರಿ 25ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು ಆನೆ ಸೆರೆಯಾಗಿಲ್ಲ. ಕಾಡಾನೆ ದಾಳಿಯಿಂದಾಗಿ ಜಿಲ್ಲೆಯಲ್ಲಿ ಅಪಾರ ಬೆಳೆಗಳು ಕೂಡ ನಾಶವಾಗಿದೆ.

Exit mobile version