Site icon PowerTV

ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಹೆಚ್ಚಿದ ಭದ್ರತೆ.!

ಬೆಂಗಳೂರು: ಮಾಜಿ ಸಿಎಂ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನಿವಾಸಕ್ಕೆ ಈಗಾಗಲೇ ಭದ್ರತೆ ಒದಗಿಸಿರುವ ರಾಜ್ಯ ಸರ್ಕಾರ ಇದೀಗ ಇನ್ನಷ್ಟು ಮುಂಜಾಗ್ರತ ಕ್ರಮ ಕೈಗೊಂಡಿದೆ ಹೆಚ್ಚಿನ ಭದ್ರತೆ ಕೈಗೊಂಡಿದೆ.

ವಾನಂದ ವೃತ್ತದ ಸಮೀಪ ಇರುವ ಸಿದ್ದರಾಮಯ್ಯ ಸರ್ಕಾರಿ ನಿವಾಸಕ್ಕೆ ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡಲಾಗಿದೆ. ಸಿದ್ದರಾಮಯ್ಯಗೆ ಜೀವ ಬೆದರಿಕೆ ಹಾಗೂ ಮೊಟ್ಟೆ ಎಸೆತ ಪ್ರಕರಣದ ಹಿನ್ನೆಲೆಯಲ್ಲಿ ಈ ಭದ್ರತೆ ಒದಗಿಸಲಾಗಿದೆ.

ಪ್ರತಿಪಕ್ಷ ನಾಯಕರ ನಿವಾಸಕ್ಕೆ ಸದಾ ಸಾರ್ವಜನಿಕರ ಭೇಟಿ ಇರುವ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ. ಭದ್ರತೆ ಹೆಚ್ಚಿಸುವ ಆದೇಶದ ಬಳಿಕ ಒಂದೊಂದೇ ಸವಲತ್ತುಗಳನ್ನು ಕಲ್ಪಿಸಲಾಗುತ್ತದೆ. ಸಿಎಂ ಬಸವರಾಜ ಬೊಮ್ಮಾಯಿ ಮೂರು ದಿನಗಳ ಹಿಂದೆ ಸಿದ್ದರಾಮಯ್ಯ ಹೆಚ್ಚಿನ ಭದ್ರತೆ ಒದಗಿಸುವ ಭರವಸೆ ನೀಡಿದ್ದರು. ಅದೇ ಪ್ರಕಾರ ನಿನ್ನೆ ಹೆಚ್ಚಿನ ಭದ್ರತೆ ಹಾಗೂ ಹೆಚ್ಚುವರಿ ಸಿಬ್ಬಂದಿ ನೀಡಿದ್ದ ಸರ್ಕಾರ ಇಂದು ಇನ್ನಷ್ಟು ಸವಲತ್ತುಗಳನ್ನು ನೀಡಿದೆ.

Exit mobile version