Monday, August 25, 2025
Google search engine
HomeUncategorizedಜಿನ್ನಾ, ಸಾವರ್ಕರ್ ಇಬ್ಬರೂ ಒಂದೇ, ದೇಶದ ಈ ಸ್ಥಿತಿಗೆ ಇವ್ರೆ ಕಾರಣ: ಬಿ.ಕೆ ಹರಿಪ್ರಸಾದ್

ಜಿನ್ನಾ, ಸಾವರ್ಕರ್ ಇಬ್ಬರೂ ಒಂದೇ, ದೇಶದ ಈ ಸ್ಥಿತಿಗೆ ಇವ್ರೆ ಕಾರಣ: ಬಿ.ಕೆ ಹರಿಪ್ರಸಾದ್

ಚಿಕ್ಕಮಗಳೂರು: ಮಹಮ್ಮದ್ ಆಲಿ ಜಿನ್ನಾ ಹಾಗೂ ಸಾವರ್ಕರ್ ಇಬ್ಬರೂ ಒಂದೇ, ಅವರಿಂದಲೇ ದೇಶ ಈ ಸ್ಥಿತಿಗೆ ಬಂದದ್ದು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಹೇಳಿದರು.

ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಸಾವರ್ಕರ್ ಭಾವಚಿತ್ರವನ್ನು ಗಣೇಶೋತ್ಸವದಲ್ಲಿ ಇರಿಸುವ ಅಭಿಯಾನ ಬಗ್ಗೆ ಮಾತನಾಡಿ, ಒಬ್ಬ ನಾಸ್ತಿಕರನ್ನು ತೆಗೆದುಕೊಂಡು ಹೋಗಿ ನಂಬಿಕಸ್ಥರ ಜಾಗದಲ್ಲಿ ಇಡುವುದು ಹಾಸ್ಯಾಸ್ಪದ. ಅವರ ಆತ್ಮಕತೆ, ಚರಿತ್ರೆ ಓದದೇ ರಾಜಕೀಯ ಹಿತಾಸಕ್ತಿಗಾಗಿ ಮಾಡಲು ಹೋದವರಿಗೆ ಏನು ಹೇಳಬೇಕೆಂದು ಗೊತ್ತಾಗುವುದಿಲ್ಲ ಎಂದು ಕಿಡಿಕಾರಿದರು.

ವೀರ್ ಸಾವರ್ಕರ್ ಓರ್ವ ನಾಸ್ತಿಕ, ಯಾವುದೇ ದೇವರು-ದಿಂಡಿರು ಬಗ್ಗೆ ನಂಬಿಕೆ ಇಲ್ಲಾ, ಅವರೂ ನಾಸ್ತಿಕರೇ, ಜಿನ್ನಾ ಕೂಡ ನಾಸ್ತಿಕರಾಗಿದ್ದರು. ಅವರಿಬ್ಬರೂ ನಾಸ್ತಿಕರು ಸೇರಿ ದೇಶವನ್ನು ಈ ಸ್ಥಿತಿ ಮಾಡಿದರು ಎಂದು ಹರಿಹಾಯ್ದರು.

ಭಾರತದ ಪರಿಕಲ್ಪನೆ ಕೊಟ್ಟಿರುವುದು ಮಹಾತ್ಮ ಗಾಂಧೀಜಿ‌. ದೇಶದ ಏಕತೆ, ಸಮಗ್ರತೆ ಬಗ್ಗೆ ಮಾತನಾಡಲು ಬಿಜೆಪಿಗೆ ಯಾವುದೇ ನೈತಿಕ ಹಕ್ಕಿಲ್ಲ. ಭಾಷೆ, ಧರ್ಮ, ಜಾತಿ ಹೆಸರಿನಲ್ಲಿ ರಾಜಕಾರಣ ಮಾಡಿ ದೇಶವನ್ನು ಕಲುಷಿತಗೊಳಿಸಿರುವುದು ಬಿಜೆಪಿ, ಬಿಜೆಪಿ ಅವರಂತೆ ಯಾತ್ರೆ ಮಾಡಿ ದಂಗೆ, ಕೊಲೆ, ಸುಲಿಗೆ ಮಾಡಿಲ್ಲ. ಅವರು ಯಾವಾಗ ಯಾತ್ರೆ ಮಾಡಿದರೂ ಕೋಮುಗಲಭೆ ಆಗಿದೆ. ನಮ್ಮದು ಜೋಡೋ ಯಾತ್ರೆ, ಒಡೆದ ಮನಸ್ಸುಗಳನ್ನು ಒಂದುಗೂಡಿಸುವ ಕೆಲಸ ಮಾಡಲಿದೆ. ಭಾರತ ಕವಲುದಾರಿಯಲ್ಲಿದ್ದು ಅಸಲಿ ದೇಶಭಕ್ತರು ಒಂದು ಕಡೆ ನಕಲಿ ದೇಶ ಭಕ್ತರಾದ ಸಂಘಿಗಳು ಮತ್ತೊಂದು ಕಡೆ ಎಂದು ಲೇವಡಿ ಮಾಡಿದ್ದಾರೆ.

ಕೇಂದ್ರದಲ್ಲಿ ಬಿಜೆಪಿ ಬಂದು 8 ವರ್ಷ ಆಗಿದೆ, ರಾಜ್ಯದಲ್ಲಿ ಬಿಜೆಪಿ ಬಂದು 3 ವರ್ಷ ಆಗಿದೆ‌. ಆದರೆ, ಜನರ ಕಷ್ಟಗಳಿಗೆ ಸ್ಪಂದಿಸಲು ಸಂಪೂರ್ಣ ವಿಫಲವಾಗಿದೆ, ಮಹಿಳೆಯರಿಗೆ ರಕ್ಷಣೆ ಕೊಡಲಾಗುತ್ತಿಲ್ಲ, ರೈತರಿಗೆ ಬೆಂಬಲ ಬೆಲೆ ಕೊಡುತ್ತಿಲ್ಲ, ಪ್ರವಾಹ ಹಾನಿಗೆ ಪರಿಹಾರ ಕೊಡುತ್ತಿಲ್ಲ, ಬೆಲೆ ಏರಿಕೆ, 50% ಕಮಿಷನ್ ಇಂದಾಗಿ ಜನರು ತತ್ತರಿಸಿ ಹೋಗಿದ್ದಾರೆ. ಈ ವಿಚಾರವನ್ನು ಮರೆಮಾಚಲು ಇತಿಹಾಸ ತಿದ್ದಿ ಗೊಂದಲ ಎಬ್ಬಿಸುವ ಕೆಲಸ ಮಾಡುತ್ತಿದ್ದಾರೆ, ಬೇರೆ ಬೇರೆ ವಿಚಾರ ಎಳೆದು ತರುತ್ತಿದ್ದಾರೆ ಎಂದು ಸಾವರ್ಕರ್ ರಥಯಾತ್ರೆಗೆ ಬಗ್ಗೆ ಕಿಡಿಕಾರಿದರು.

RELATED ARTICLES
- Advertisment -
Google search engine

Most Popular

Recent Comments