Site icon PowerTV

ಇಂದು ದೆಹಲಿ ಕಡೆಗೆ ಬಿ.ಎಸ್ ಯಡಿಯೂರಪ್ಪ ಪ್ರಯಾಣ

ಬೆಂಗಳೂರು : ಮುಂದೆ ಏನು ಕೆಲಸ ಮಾಡಬೇಕು ಎಂದು ಅವರ ಸಲಹೆ ಕೇಳುವುದು ನನ್ನ ಕರ್ತವ್ಯ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಇನ್ನು, ದೆಹಲಿಗೆ ಹೊರಡ್ತಾ ಇದ್ದೇನೆ ಇವತ್ತು. ನಾಳೆ ಅಲ್ಲೇ ಇರುತ್ತೇನೆ. ಇವತ್ತು ಸಂಜೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗುತ್ತಿದ್ದೇನೆ. ನಂತರ ಅಮಿತ್ ಶಾ ಹಾಗೂ ಜೆಪಿ ನಡ್ಡಾ ಅವರನ್ನು ಭೇಟಿಯಾಗುತ್ತಿದ್ದೇನೆ. ರಾಜನಾಥ್ ಸಿಂಗ್ ಸೇರಿದಂತೆ ಕೆಲವು ಕೇಂದ್ರ ಸಚಿವರನ್ನು ಭೇಟಿಯಾಗುತ್ತೇನೆ. ನಾಳೆ ಸಂಜೆ ವಾಪಸ್ ಬರಬೇಕು ಎಂದುಕೊಂಡಿದ್ದೇನೆ ಎಂದರು.

ಅದಲ್ಲದೇ, ಇವತ್ತು ಮತ್ತು ನಾಳೆ ನಾನು ದೆಹಲಿಯಲ್ಲಿ ವಾಸ್ತವ ಹೂಡುತ್ತೇನೆ. ಮುಂದೆ ಏನು ಕೆಲಸ ಮಾಡಬೇಕು ಎಂದು ಅವರ ಸಲಹೆ ಕೇಳುವುದು ನನ್ನ ಕರ್ತವ್ಯ. ದತ್ತಾತ್ರೇಯ ಹೊಸ ಬಾಳೆ ಅವರನ್ನು ಭೇಟಿಯಾಗಲು ಪ್ರಯತ್ನ ಪಡುತ್ತೇನೆ ಎಂದರು.

Exit mobile version