Site icon PowerTV

ಕಾಂಗ್ರೆಸ್​ ಪ್ರಾಥಮಿಕ ಸದಸ್ಯತ್ವಕ್ಕೆ ಗುಲಾಂ ನಬಿ ಆಜಾದ್ ರಾಜೀನಾಮೆ

ನವದೆಹಲಿ : ಹಲವು ರಾಜಕೀಯ ಆಯಾಮಗಳ ಬಳಿಕ ಕಾಂಗ್ರೆಸ್​ ಪಕ್ಷದ ಹಿರಿಯ ಮುಖಂಡ ಗುಲಾಂ ನಬಿ ಆಜಾದ್ ಕಾಂಗ್ರೆಸ್​ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ತೀವ್ರ ವಿಷಾದದಿಂದ ನಾನು ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ಗುಲಾಂ ನಬಿ ಅಜಾದ್​​​ ಅವರು ಸೋನಿಯಾ ಗಾಂಧಿಗೆ ಬಹಳ ಹತ್ತಿರ ಆಗಿದ್ದವರು. ಪಕ್ಷದ ನಾಯಕತ್ವ ಕಾರ್ಯನಿರ್ವಹಿಸುತ್ತಿರುವ ರೀತಿ ಬದಲಾಗಬೇಕು ಎಂದು ಆಗ್ರಹಿಸಿ ಪತ್ರ ಬರೆದಿದ್ದ ಜಿ-23 ಸಮಿತಿಯಲ್ಲಿ ಗುಲಾಂ ನಬಿ ಆಜಾದ್ ಸಹ ಇದ್ದರು. ಗುಲಾಂ ನಬಿ ಆಜಾದ್ ಅವರನ್ನು ಜಮ್ಮು ಕಾಶ್ಮೀರ ಕಾಂಗ್ರೆಸ್ ಸಮಿತಿಯ ಪ್ರಚಾರ ಸಮಿತಿ ಅಧ್ಯಕ್ಷರಾಗಿ ನೇಮಿಸಲಾಗಿತ್ತು. ನೇಮಕಾತಿ ಆದೇಶ ಹೊರಬಿದ್ದ ಕೆಲಹೊತ್ತಿನಲ್ಲಿಯೇ ಅವರು ರಾಜೀನಾಮೆ ನೀಡುವ ನಿರ್ಧಾರ ಪ್ರಕಟಿಸಿದ್ದರು.

ಇತ್ತೀಚೆಗೆ ಪಕ್ಷದ ಜಮ್ಮು ಕಾಶ್ಮೀರ ರಾಜಕೀಯ ವ್ಯವಹಾರ ಸಮಿತಿಗೂ ಆಜಾದ್ ರಾಜೀನಾಮೆ ನೀಡಿದ್ದರು. ಈಗ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದಾರೆ.

Exit mobile version