Site icon PowerTV

ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಗ್ರೀನ್ ಸಿಗ್ನಲ್

ಬೆಂಗಳೂರು: ಹೈಕೋರ್ಟ್ ವಿಭಾಗೀಯ ಪೀಠವು ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶ್ ಪ್ರತಿಷ್ಠಾಪನೆಗೆ ರಾಜ್ಯ ಸರ್ಕಾರ ವಿಚೇಚನೆಗೆ ಬಿಟ್ಟಿದೆ.

ಸಾರ್ವಜನಿಕರ ಮನವಿಗಳನ್ನು ಆಧರಿಸಿ ರಾಜ್ಯ ಸರ್ಕಾರ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಬೇಕು ಅಥವಾ ಬೇಡ ಎಂದು ತೀರ್ಮಾನ ಮಾಡಬೇಕು ಎಂದು ಹೈಕೋರ್ಟ್​ ಹೇಳಿದೆ. ಈ ಮೂಲಕ ಹೈಕೋರ್ಟ್​ ಗಣೇಶ್ ಹಬ್ಬ ಆಚರಣೆಗೆ ಸರ್ಕಾರದ ವಿವೇಚನೆಗೆ ಬಿಟ್ಟಿದೆ.

ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದ ಹೈಕೋರ್ಟ್, ಅನುಮತಿ ಕೋರಿದ ಅರ್ಜಿಗಳನ್ನು ಪರಿಶೀಲಿಸಿ ಅನುಮತಿ ನೀಡಬಹುದು. ಧಾರ್ಮಿಕ, ಸಾಂಸ್ಕೃತಿಕ ಆಚರಣೆಗೆ ಅನುಮತಿ ನೀಡಬಹುದು. ಆ.31 ರಿಂದ ನಿರ್ದಿಷ್ಟ ಅವಧಿಗೆ ಅನುಮತಿ ನೀಡಲಾಗಿದೆ.

Exit mobile version