Site icon PowerTV

ಕಾಂಗ್ರೆಸ್ ತೊರೆಯಲ್ಲ.. ಎಲ್ಲವೂ ಊಹಾಪೋಹ ಅಷ್ಟೇ: ಕೆ.ಹೆಚ್ ಮುನಿಯಪ್ಪ

ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ದೊಡ್ಡ ಮಟ್ಟದಲ್ಲಿ ರಾಜಕೀಯ ನಾಯಕರ ಪಕ್ಷಾಂತರ ಪರ್ವ ಆರಂಭವಾಗುವ ಸಾಧ್ಯತೆ ದಟ್ಟವಾಗಿದೆ. ಕಾಂಗ್ರೆಸ್ ಹಿರಿಯ ನಾಯಕ ಕೆ.ಹೆಚ್ ಮುನಿಯಪ್ಪ ಇಂದು ಸಚಿವ ಕೆ ಸುಧಾಕರ್ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಬೆಂಗಳೂರಿನ ಸದಾಶಿವನಗರದ ನಿವಾಸಕ್ಕೆ ಆಗಮಿಸಿದ ಕೆ.ಹೆಚ್ ಮುನಿಯಪ್ಪ, ಸಚಿವ ಸುಧಾಕರ್ ಅವರನ್ನು ಭೇಟಿಯಾಗಿ ಒಂದುವರೆ ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ. ಈ ಸಂಬಂಧ ಕೆ.ಎಚ್ ಮುನಿಯಪ್ಪ ಕಾಂಗ್ರೆಸ್ ತೊರೆಯುತ್ತಾರೆ ಎಂಬ ಉಹಾಪೋಹಗಳು ಹರಿದಾಡುತ್ತಿದ್ದವು. ಆದರೆ ಈ ವದಂತಿಗಳಿಗೆ ಕೆ.ಎಚ್.ಮುನಿಯಪ್ಪ ತೆರೆ ಎಳೆದಿದ್ದಾರೆ.

ಸುಧಾಕರ್ ಭೇಟಿಯಾಗಿ ಬಳಿಕ ಮಾತನಾಡಿದ ಅವರು, ನಾನು ಕಾಂಗ್ರೆಸ್ ತೊರೆಯಲ್ಲ. ರಾಜಕೀಯ ಹೊರತಾದ ಸಂಬಂಧ ಸುಧಾಕರ್ ಜೊತೆಗಿದೆ. ಎಲ್ಲವೂ ಊಹಾಪೋಹಗಳು ಅಷ್ಟೇ ಎಂದು ಸ್ಪಷ್ಟ ಪಡಿಸಿದರು.

Exit mobile version