Site icon PowerTV

ಕಾಂಗ್ರೆಸ್​ನಲ್ಲಿ ಮುಂದುವರೆದ ರಾಜೀನಾಮೆ ಪರ್ವ ‘ಕೈ’ ಕೊಟ್ಟ ಮತ್ತಷ್ಟು ನಾಯಕರು

ನವದೆಹಲಿ: ಕಾಂಗ್ರೆಸ್​ ಹಿರಿಯ ಮುಖಂಡ ಗುಲಾಂ ನಬಿ ಆಜಾದ್ ಅವರು ಕಾಂಗ್ರೆಸ್​ ಪಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆಯಲ್ಲಿ ಕಾಂಗ್ರೆಸ್​ನ ತಮ್ಮ ಸ್ಥಾನಕ್ಕೆ ಮತ್ತಷ್ಟು ನಾಯಕರುಗಳು ರಾಜೀನಾಮೆ ಸಲ್ಲಿದ್ದಾರೆ.

ಇಂದು ಗುಲಾಂ ನಬಿ ಆಜಾದ್ ಅವರು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರದ ಮೂಲ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್​​ ನಲ್ಲಿ ತಮ್ಮನ್ನ ಬಳಸಿಕೊಳ್ಳುತ್ತಿಲ್ಲ ಹಾಗೂ ರಾಹುಲ್ ಗಾಂಧಿ ವಿರುದ್ಧ ಕಿಡಿಕಾರಿದ್ದರು.

ಗುಲಾಂ ನಬಿ ಆಜಾದ್ ರಾಜೀನಾಮೆ ನೀಡಿದ ಬೆನ್ನಲ್ಲೇ ಜಮ್ಮು ಕಾಶ್ಮೀರ ಮಾಜಿ ಸಚಿವ ಮಾಜಿ ಸಚಿವ ಆರ್​.ಎಸ್​ ಚಿಬ್ ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಅಲ್ಲದೇ, ಕಾಂಗ್ರೆಸ್​ ಸದಸ್ಯತ್ವ ಸ್ಥಾನಕ್ಕೆ ಜಮ್ಮು ಕಾಶ್ಮೀರದ ಕೆಪಿಸಿಸಿ ಉಪಾಧ್ಯಕ್ಷ ಹಾಜಿ ಅಬ್ದುಲ್ ರಶೀದ್, ಜ.ಕಾಶ್ಮೀರ ಕೆಪಿಸಿಸಿ ಮಾಜಿ ಉಪಾಧ್ಯಕ್ಷ ಜಿಮ್ ಸರೂರಿ, ಜಮ್ಮ ಕಾಶ್ಮೀರದ ಯೂತ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಅಮೀನ್ ಭಟ್, ಅನಂತನಾಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಗುಲ್ಜಾರ್ ಅಹ್ಮದ್ ವಾನಿ, ಎಸ್​​ಸಿ ಸಾಮಾಜಿಕ ಜಾಲತಾಣ ಅಧ್ಯಕ್ಷ ಚೌಧರಿ ಮೊಹಮ್ಮದ್ ಅಕ್ರಮ್ ರಾಜೀನಾಮೆ ನೀಡಿದ್ದಾರೆ. ಗುಲಾಂ ನಬಿ ಆಜಾದ್ ಅವರನ್ನು ಬೆಂಬಲಿಸಿ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇವೆ ಎಂದು ಪತ್ರದಲ್ಲಿ ಹೇಳಿದ್ದಾರೆ.

Exit mobile version