Site icon PowerTV

ಪ್ರಧಾನಿ ಮೋದಿ ಭೇಟಿಯಾದ ಯಡಿಯೂರಪ್ಪ

ನವದೆಹಲಿ: ನವದೆಹಲಿಯಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಭೇಟಿಯಾಗಿದ್ದಾರೆ.

ಇತ್ತೀಚಿಗೆ ಬಿ.ಎಸ್ ಯಡಿಯೂರಪ್ಪ ಅವರು ಬಿಜೆಪಿ ಸಂಸದೀಯ ಮಂಡಳಿಗೆ ಸೇರ್ಪಡೆಗೊಂಡ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಧನ್ಯವಾದ ತಿಳಿಸಿದರು.

ಸುಮಾರು 20 ನಿಮಿಷಗಳ ಮೋದಿ ಮಾತುಕತೆ ನಡೆಸಿದ ಬಿಎಸ್​ವೈ, ರಾಜ್ಯದ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಲಾಯಿತು. ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಪಕ್ಷದ ಸಂಘಟನೆ, ಇತ್ತೀಚಿನ ಘಟನೆಗಳ ಬಗ್ಗೆ ಚರ್ಚೆ ನಡೆಸಲಾಯಿತು.

ಸೆ. 2ರಂದು ಮಂಗಳೂರಿಗೆ ಪ್ರಧಾನ ಮಂತ್ರಿ ಬರುತ್ತಿದ್ದು, ದೊಡ್ಡ ಪ್ರಮಾಣದಲ್ಲಿ ಲಕ್ಷ ಜನ ಸೇರಿಸಿ ಕಾರ್ಯಕ್ರಮ ಮಾಡ್ತಿದ್ದೇವೆ. ಒಟ್ಟಾಗಿ ಸಾಮೂಹಿಕ ನೇತೃತ್ವದಲ್ಲಿ ಪ್ರವಾಸ ಮಾಡಲು ನಿಶ್ಚಯವಾಗಿದೆ. ಎಲ್ಲಾ ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತೇವೆ ಎಂದು ಪ್ರಧಾನಿ ಭೇಟಿ ಬಳಿಕ ದೆಹಲಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಮಾತನಾಡಿದರು.

Exit mobile version