Site icon PowerTV

ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಹೃದಯಾಘಾತವಲ್ಲ… ಕೊಲೆ.!

ಮುಂಬೈ: ನಿಗೂಢವಾಗಿ ಮೃತಪಟ್ಟ ಬಿಜೆಪಿ ನಾಯಕಿ, ನಟಿ ಸೋನಾಲಿ ಫೋಗಟ್ ಅವರಿಗೆ ಅವರ ಇಬ್ಬರು ಸಹಚರರು ಪಾರ್ಟಿಯಲ್ಲಿ ಬಲವಂತವಾಗಿ ಡ್ರಗ್ಸ್ ನೀಡಿದ್ದಾರೆ ಎಂದು ಗೋವಾ ಪೊಲೀಸರು ತಿಳಿಸಿದ್ದಾರೆ.

ಡ್ರಗ್ಸ್​ ನೀಡಿರುವುದಾಗಿ ಆರೊಪಿಗಳು ಒಪ್ಪಿಕೊಂಡಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಆರೋಪಿ ಸುಧೀರ್ ಸಂಗ್ವಾನ್ ಮತ್ತು ಆತನ ಸಹಚರ ಸುಖ್ವಿಂದರ್ ಸಿಂಗ್​​​​ನನ್ನು ಬಂಧಿಸಲಾಗಿದೆ. ಸಿಸಿಟಿವಿಯಲ್ಲಿ ಅವರು ಕ್ಲಬ್‌ನಲ್ಲಿ ಸೋನಾಲಿ ಜೊತೆ ಪಾರ್ಟಿ ಮಾಡುತ್ತಿರುವುದು ಕಂಡುಬಂದಿದೆ. ಅವರಲ್ಲಿ ಒಬ್ಬರು ಬಿಜೆಪಿ ನಾಯಕಿಗೆ ಮಾದಕ ದ್ರವ್ಯ ಸೇವಿಸುವಂತೆ ಬಲವಂತ ಮಾಡಿರುವುದು ವಿಡಿಯೋದಲ್ಲಿ ದೃಢಪಟ್ಟಿದೆ.

ಆರೋಪಿಗಳಾದ ಸುಧೀರ್ ಸಂಗ್ವಾನ್ ಮತ್ತು ಸುಖ್ವಿಂದರ್ ಸಿಂಗ್ ಆಗಸ್ಟ್ 22 ರಂದು ಫೋಗಟ್ ಜೊತೆಗೆ ಗೋವಾಗೆ ಪ್ರಯಾಣ ಬೆಳೆಸಿದ್ದರು. ಸೋನಾಲಿ ಫೋಗಟ್‌ ಸಾಯುವ ಹಿಂದಿನ ದಿನ ರಾತ್ರಿ ಪಾರ್ಟಿಯೊಂದರಲ್ಲಿ ಭಾಗಿಯಾಗಿದ್ದರು. ಈ ವೇಳೆ ಅವರಿಗೆ ಬಲವಂತದಿಂದ ಮಾದಕ ವಸ್ತು ನೀಡಲಾಗಿದೆ.

ವಿಚಾರಣೆ ವೇಳೆ ಸುಖ್ವಿಂದರ್ ಮತ್ತು ಸುಧೀರ್ ಅವರು ಉದ್ದೇಶಪೂರ್ವಕವಾಗಿ ಯಾವುದೋ ಒಂದು ರಾಸಾಯನಿಕವನ್ನು ಬೆರೆಸಿ ಸೋನಾಲಿ ಫೋಗಟ್ ಅವರಿಗೆ ಕುಡಿಯುವಂತೆ ಬಲವಂತ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.

Exit mobile version