Site icon PowerTV

ಮುರುಘಾ ಶ್ರೀಗಳ ಮೇಲೆ FIR, ತನಿಖೆಯ ನಂತರ ಸತ್ಯ ಹೊರ ಬೀಳಲಿದೆ- ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುರುಘಾ ಮಠದ ಶ್ರೀಗಳ ಮೇಲೆ ಪೋಸ್ಕೊ ಅಡಿ ಪ್ರಕರಣ ದಾಖಲಾಗಿದ್ದು, ತನಿಖೆಯ ನಂತರ ಸತ್ಯ ಹೊರಬೀಳಲಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯದವರೊಂದಿಗೆ ಮಾತನಾಡಿದರು. ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ವಿದೆ. ತನಿಖೆ ಮಾಡಿದ ನಂತರ ಸತ್ಯ ಹೊರಗೆ ಬರಲಿದೆ ಎಂದರು.

ಇದೊಂದು ಪ್ರಮುಖ ಪ್ರಕರಣ. ಪೋಸ್ಕೊ ಪ್ರಕರಣವೂ ಆಗಿದೆ ಹಾಗೂ ಚಿತ್ರದುರ್ಗದಲ್ಲಿ ಕಿಡ್ನಾಪ್ ಪ್ರಕರಣವೂ ದಾಖಲಾಗಿದೆ. ಎರಡೂ ಪ್ರಕರಣಗಳನ್ನು ದಾಖಲಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ನಾವು ಮಾತನಾಡುವುದಾಗಲಿ, ವ್ಯಾಖ್ಯಾನ ಮಾಡುವುದಾಗಲಿ ತನಿಖೆಯ ದೃಷ್ಟಿಯಿಂದ ಸರಿಯಲ್ಲ.

Exit mobile version