Site icon PowerTV

ಬೆಂಗಳೂರಿನಲ್ಲಿ ನಿಲ್ಲದ ಮಳೆ ರಗಳೆ

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ‌ಯಲ್ಲಿ ಸಿಲಿಕಾನ್​ ಸಿಟಿಯಲ್ಲಿ ಮೂರು ದಿನದಿಂದ ವರುಣನ ಆರ್ಭಟ ಮುಂದುವರೆದಿದೆ. ಭಾರಿ ಮಳೆಯಿಂದಾಗಿ ಅವಾಂತರಗಳೇ ಸೃಷ್ಟಿಯಾಗಿದೆ. ನಗರದ ಸಾಯಿ ಲೇಔಟ್​ನ ರಸ್ತೆಗಳು ಮತ್ತೆ ಕೆರೆಯಂತಾಗಿದೆ. ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುವಂತಾಗಿದೆ.

ನಾಗವಾರದ ರಾಜಕಾಲುವೆ ಪಕ್ಕದಲ್ಲಿರುವ ಮನೆಯ ಗೋಡೆ ಕುಸಿದಿದೆ. ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಮನೆಯಲ್ಲಿ ಎರಡು ಕುಟುಂಬಗಳು ವಾಸವಾಗಿತ್ತು. ಮಳೆ ನೀರು ಮನೆಗೆ ನುಗ್ಗಿದ ಹಿನ್ನೆಲೆಯಲ್ಲಿ ಬೇರೆ ಮನೆಯಲ್ಲಿ ರಾತ್ರಿ ಕುಟುಂಬಸ್ಥರು ಮಲಗಿದ್ದರು. ಬೆಳಗ್ಗೆ ಅಷ್ಟರಲ್ಲಿ ಮನೆಯ ಗೋಡೆ ಸಂಪೂರ್ಣವಾಗಿ ಕುಸಿತಗೊಂಡಿದೆ. ಹೀಗಾಗಿ ಅನಾಹುತವೊಂದು ತಪ್ಪಿದಂತಾಗಿದೆ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದ್ರೂ ಯಾವುದೇ ಪ್ರಯೋಜನವಾಗಿಲ್ಲ ಅಂತಾರೆ ಇಲ್ಲಿನ ಸ್ಥಳೀಯರು.

ಬೆಂಗಳೂರಿನಲ್ಲಿ ಇನ್ನು 3 ದಿನ ವರುಣ ಅಬ್ಬರಿಸಲಿರುವ ಬಗ್ಗೆ ಹವಮಾನ ಇಲಾಖೆ ಮುನ್ಸೂಚನೆ ‌ನೀಡಿದೆ. ತಗ್ಗು ಪ್ರದೇಶದ ಜನರು ಹಾಗೂ ರಾಜಕಾಲುವೆಯ ಅಕ್ಕಪಕ್ಕದಲ್ಲಿ ವಾಸಿಸುವ ಜನರು ಎಚ್ಚರಿಕೆಯಿಂದ ಇರಬೇಕಾಗಿದೆ. 3 ದಿನಗಳು ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಒಟ್ನಲ್ಲಿ ಇನ್ನು 3 ದಿನಗಳ ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚಿನ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಹೀಗಾಗೀ ತಗ್ಗು ಪ್ರದೇಶ ಹಾಗೂ ರಾಜಕಾಲುವೆಯ ಅಕ್ಕಪಕ್ಕ ವಾಸಿಸುವ ಜನರು ಎಚ್ಚರಿಕೆಯಿಂದ ಇರಬೇಕಾಗಿದೆ.

ಸ್ವಾತಿ ಪುಲಗಂಟಿ ಮೆಟ್ರೋ ಬ್ಯುರೋ ಬೆಂಗಳೂರು

Exit mobile version