Monday, August 25, 2025
Google search engine
HomeUncategorizedನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಬಲವಂತವಾಗಿ ಆಹ್ವಾನ: ಮಾಜಿ ಸಚಿವ ಯುಟಿ ಖಾದರ್​​

ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಬಲವಂತವಾಗಿ ಆಹ್ವಾನ: ಮಾಜಿ ಸಚಿವ ಯುಟಿ ಖಾದರ್​​

ಮಂಗಳೂರು: ಸೆಪ್ಟೆಂಬರ್​ 2 ರಂದು ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ಬಲವಂತವಾಗಿ ಜನರಿಗೆ ಅಹ್ವಾನಿಸಲಾಗುತ್ತಿದೆ ಎಂದು ಮಾಜಿ ಸಚಿವ ಯುಟಿ ಖಾದರ್​ ಆರೋಪಿಸಿದ್ದಾರೆ.

ಮಂಗಳೂರಿನಲ್ಲಿ ಮೋದಿ ನಡೆಸುವ ಕಾರ್ಯಕ್ರಮದಲ್ಲಿ ಈ ಮೈದಾನ ಜನರಿಗೆ ಸಾಕಾಗುತ್ತಾ ಇಲ್ವಾ ಎನ್ನು ಪ್ರಶ್ನೆ ಎದುರಾಗಿದೆ. ಪ್ರಸ್ತುತ ಮೈದಾನಕ್ಕಿಂತ ದೊಡ್ಡ ಜಾಗ ಬೇಕು ಅಂತಾ ಕಾಣಿಸುತ್ತಿದೆ. ಉಡುಪಿ-ದ.ಕ ಜಿಲ್ಲೆಯ ಎಲ್ಲಾ ಗ್ರಾ.ಪಂಚಾಯತ್ ಪಿಡಿಒಗಳಿಗೆ ನೊಟೀಸ್ ಕಳುಹಿಸಲಾಗಿದೆ. ಪ್ರತಿ ಗ್ರಾಮದಿಂದ 250 ಜನರನ್ನು ಮೋದಿ ಕಾರ್ಯಕ್ರಮಕ್ಕೆ ಕರೆತರಲು ಜಿಲ್ಲಾಡಳಿತ ಸೂಚನೆ ನೀಡಿದೆ ಎಂದರು.

ಕಂದಾಯ ಇಲಾಖೆಯಿಂದ, ಗ್ರಾ.ಪಂ ಕಾರ್ಯದರ್ಶಿ, ಲೈನ್ ಮ್ಯಾನ್, ನೀರು ಬಿಡುವವನಿಗೆ ನೋಟಿಸ್​ ನೀಡಲಾಗಿದೆ. ಶಾಲಾ ಕಾಲೇಜುಗಳಿಗೆ ರಜೆ ನೀಡಿ ಎಲ್ಲಾ ಮಕ್ಕಳೂ ಕಾರ್ಯಕ್ರಮದಲ್ಲಿ ಭಾಗವಿಸಬೇಕೆಂದು ಹೇಳಲಾಗಿದೆ.

ಎಲ್ಲಾ ಬ್ಯಾಂಕ್ ಗಳಿಗೆ ಸೂಚನೆ ನೀಡಿ, ಬ್ಯಾಂಕ್ ಸವಲತ್ತು ಪಡೆದವರನ್ನು ಕರೆತರಬೇಕೆಂದು ಸೂಚಿಸಲಾಗಿದೆ. ಜಿಲ್ಲಾಧಿಕಾರಿ ಸೂಚನೆ ನೀಡಿದಾಗ ಕೆಳ ಅಧಿಕಾರಿಗಳು ಜನರನ್ನು ಕರೆತರಲೇಬೇಕು. ಇಲ್ಲವಾದಲ್ಲಿ ಅಧಿಕಾರಿಗಳು ಅವರ ಮನೆಯವರನ್ನು ಆದರೂ ಕರೆತರಬೇಕು ಎಂದು ಒತ್ತಡ ಹಾಕುತ್ತಿದ್ದಾರೆ ಎಂದು ಯುಟಿ ಖಾದರ್ ಹೇಳಿದರು.

ಒಂದು ವಾರದಿಂದ ಎಲ್ಲಾ ಅಧಿಕಾರಿಗಳು ಮೋದಿ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ. ಎಲ್ಲಾ ಸಿಕ್ಕ‌ಸಿಕ್ಕ ಮೀನುಗಾರರಿಗೂ ಕಿಸಾನ್ ಕಾರ್ಡ್ ನೀಡಿ ಕಾರ್ಯಕ್ರಮ ಕ್ಕೆ ಬರಲು ಸೂಚಿಸಿದ್ದಾರೆ. ಇಷ್ಟೆಲ್ಲಾ ಸೂಚನೆ ನೀಡಿದ ಬಳಿಕ ಜನಸಾಗರವೇ ಬರಲಿದೆ. ಜನರಿಗೆ ಯಾವುದೇ ತೊಂದರೆ ಆಗದಂತೇ ಜಿಲ್ಲಾಡಳಿತ ಕ್ರಮ ಜರುಗಿಸಬೇಕು ಎಂದು ಯುಟಿ ಖಾದರ್ ಲೇವಡಿ ಮಾಡಿದರು.

RELATED ARTICLES
- Advertisment -
Google search engine

Most Popular

Recent Comments