Site icon PowerTV

ಸಿಎಂ ಯೋಗಿ ಆದಿತ್ಯನಾಥ್ ಕರ್ನಾಟಕಕ್ಕೆ ಆಗಮನ

ಬೆಂಗಳೂರು : ನಾಳೆ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ್ಕೆ ಭೇಟಿ ನೀಡಲಿದ್ದಾರೆ. ಆದರೆ ಪ್ರಧಾನಿಗೂ ಮುನ್ನವೇ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ರಾಜ್ಯಕ್ಕೆ ಆಗಮಿಸಲಿದ್ದಾರೆ.

ಇಂದು ಸಿಎಂ ಯೋಗಿ ಆದಿತ್ಯನಾಥ್ ಕರ್ನಾಟಕಕ್ಕೆ ಆಗಮಿಸುತ್ತಿದ್ದು, ಬೆಳಗ್ಗೆ 11:30ಕ್ಕೆ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನೆಲಮಂಗಲದಲ್ಲಿರೋ ಧರ್ಮಸ್ಥಳದ ಎಸ್‌ಡಿಎಂಇ ಸೊಸೈಟಿಯ 3ನೇ ನಿಸರ್ಗದತ್ತ ಆರೋಗ್ಯ ಕ್ಷೇಮಪಾಲನಾ ಕೇಂದ್ರವಾದ ಕ್ಷೇಮವನ ಉದ್ಘಾಟನೆ ಮಾಡಲಿದ್ದಾರೆ.

ಸುಮಾರು 15 ನಿಮಿಷ ಕ್ಯಾಂಪಸ್ ವೀಕ್ಷಿಸಲಿದ್ದು, ನಂತರ ಧರ್ಮಸ್ಥಳ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ಜತೆ ಮಾತುಕತೆ ನಡೆಸಲಿದ್ದಾರೆ. ಕಾರ್ಯಕ್ರಮದಲ್ಲಿ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯಸಭಾ ಸದಸ್ಯರು ಹಾಗೂ ಧರ್ಮಸ್ಥಳದ ಧರ್ಮಾಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ವಹಿಸಲಿದ್ದಾರೆ.

Exit mobile version