Site icon PowerTV

ತನಿಖೆಯಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ : ಆರಗ ಜ್ಞಾನೇಂದ್ರ

ಶಿವಮೊಗ್ಗ : ಲೈಂಗಿಕ ದೌರ್ಜನ್ಯ ಆರೋಪ ಸಂಬಂಧ ಪೋಕ್ಸೋ ಕಾಯ್ದೆಯಡಿ ಬಂಧಿತರಾಗಿರುವ ಮುರುಘಾ ಮಠದ ಡಾ.ಶಿವಮೂರ್ತಿ ಸ್ವಾಮೀಜಿ ವಿಚಾರವಾಗಿ ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ.

ಇನ್ನು, ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆ ವಿಚಾರದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ. ತನಿಖೆ ದೃಷ್ಟಿಯಿಂದ ಹೆಚ್ಚಿಗೆ ಏನನ್ನೂ ಹೇಳುವುದಿಲ್ಲ. ಮುನ್ನೆಚ್ಚರಿಕಾ ಕ್ರಮವಾಗಿ ಮುರುಘಾ ಮಠಕ್ಕೆ ಸೂಕ್ತ ಬಂದೋಬಸ್ತ್ ಕಲ್ಪಿಸಲಾಗಿದ್ದು, 7 ಕೆಎಸ್​ಆರ್​ಪಿ ತುಕಡಿ ನಿಯೋಜಿಸಲಾಗಿದೆ ಎಂದರು.

ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ಕೊಟ್ಟ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಗೃಹಸಚಿವರು, ರಾಜ್ಯದ ಬಗ್ಗೆ ಮೋದಿಯವರಿಗೆ ವಿಶೇಷ ಆಸಕ್ತಿ ಇದೆ. ತಿಂಗಳಿಗೊಮ್ಮೆ ಭೇಟಿ ನೀಡುವುದಾಗಿ‌ ಹೇಳಿದ್ದಾರೆ. ಚುನಾವಣೆಗೆ ನಾವು ಸಿದ್ದರಾಗಿದ್ದೇವೆ. ಈ ಹಿಂದೆ ತಾತ್ಕಾಲಿಕವಾಗಿ ರದ್ದುಗೊಂಡಿದ್ದ ಜನೋತ್ಸವ ಕಾರ್ಯಕ್ರಮವೂ ಸೆ.8ರಂದು ನಡೆಯಲಿದೆ ಎಂದು ತಿಳಿಸಿದರು.

Exit mobile version