Site icon PowerTV

ವಾರ್ಡನ್ ರಶ್ಮಿಗೆ ಸೆ.14ರವರೆಗೆ ನ್ಯಾಯಾಂಗ ಬಂಧನ

ಚಿತ್ರದುರ್ಗ : ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧಿತರಾಗಿರುವ ಮುರುಘಾ ಮಠದ ಶ್ರೀಗಳನ್ನು ಪೊಲೀಸ್ ಕಸ್ಟಡಿಗೆ ನೀಡಿದ ಬೆನ್ನಲ್ಲೆ ಪ್ರಕರಣದ ಎರಡನೇ ಆರೋಪಿ ಮಹಿಳಾ ವಾರ್ಡನ್​ಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದೆ.

ಇನ್ನು, ಆರೋಪಿ ಮಹಿಳಾ ವಾರ್ಡನ್​ ಅವರನ್ನು ಜಿಲ್ಲೆಯ 2ನೇ ಹೆಚ್ಚುವರಿ ಸೆಷನ್ಸ್​ ನ್ಯಾಯಾಲಯದ ಮುಂದೆ ಪೊಲೀಸರು ಹಾಜರು ಪಡಿಸಿದ್ದರು. ಈ ವೇಳೆ ನ್ಯಾಯಾಧೀಶೆ ಕೋಮಲಾ ಅವರಿದ್ದ ಪೀಠವು ಆರೋಪಿಯನ್ನು 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ಅದಲ್ಲದೇ, ಮಠದ ಹಾಸ್ಟೆಲ್ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅರೋಪದಡಿ ಬಂಧಿತರಾಗಿರುವ ಮಹಿಳಾ ವಾರ್ಡನ್ 2ನೇ ಆರೋಪಿಯಾಗಿದ್ದಾರೆ. ನಿನ್ನೆ ಪೊಲೀಸರು ಬಂಧಿಸಿದ್ದರು. ಇಂದು 2ನೇ ಹೆಚ್ಚುವರಿ ಸೆಷನ್ಸ್​ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಕಸ್ಟಡಿಗೆ ನೀಡುವಂತೆ ಪೊಲೀಸರು ಮನವಿ ಮಾಡಿದ್ದರು. ಅದರಂತೆ ಆರೋಪಿಯನ್ನು 14ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶ ಹೊರಡಿಸಿದೆ.

Exit mobile version