Site icon PowerTV

ಹಣಕ್ಕೆ ಬೇಡಿಕೆ, ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಕಾರವಾರ: ಬ್ಲಾಕ್‌ಮೇಲ್‌ಗೆ ಬೇಸತ್ತು ಉತ್ತರಪ್ರದೇಶ ಮೂಲದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ಪಟ್ಟಣದಲ್ಲಿ ನಡೆದಿದೆ.

ಸುಹೇಲ್ ಸುಲಮಾನಿ (23) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ, ಅಂಕೋಲಾದ ಕಾಕರಮಠದ ಬಳಿ ಸಹೋದರನೊಂದಿಗೆ ಹೇರ್ ಸೆಲೂನ್ ನಡೆಸಿಕೊಂಡು ಹೋಗುತ್ತಿದ್ದ. ಹಣಕ್ಕೆ ಬೇಡಿಕೆಯಿಟ್ಟು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದರೆಂದು ವೀಡಿಯೋದಲ್ಲಿ ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಅಂಕೋಲಾದ ಕೋಟೆ ಮಾರುತಿ ದೇವಸ್ಥಾನದ ಬಳಿ ನನ್ನ ಸಾವಿಗೆ ನಾನೇ ಕಾರಣ, ಯಾರೂ ನನ್ನ ಹತ್ಯೆ ಮಾಡಿಲ್ಲ. ಮನೆಯವರ ಮರ್ಯಾದೆಗೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿ ವೀಡಿಯೋ ಮಾಡಿಟ್ಟು ಆತ್ಮಹತ್ಯೆ ಸುಹೇಲ್ ಮಾಡಿಕೊಂಡಿದ್ದಾನೆ. ಈ ಬಗ್ಗೆ ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version