Site icon PowerTV

941 ಮಂದಿಗೆ ಕೊರೋನಾ ಪಾಸಿಟಿವ್ : 1 ಸಾವು

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, 941 ಮಂದಿಗೆ ಕೋವಿಡ್​​​​ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40ಲಕ್ಷಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40,203ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರಿನಲ್ಲಿ 526 ಮಂದಿಗೆ ಸೋಂಕು ದೃಢಪಟ್ಟಿದೆ.

ರಾಜಧಾನಿಯಲ್ಲಿ ಯಾವುದೇ ಕೊರೋನಾ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ. ರಾಜ್ಯದಲ್ಲಿ 788 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Exit mobile version