Site icon PowerTV

ಗಂಡನನ್ನ ಬೆಂಗಳೂರಲ್ಲಿ ಕೊಲೆ ಮಾಡಿ ಮಂಡ್ಯದಲ್ಲಿ ಸಿಕ್ಕಿ ಬಿದ್ದ ಹೆಂಡತಿ

ಬೆಂಗಳೂರು : ಗಂಡನನ್ನ ಬೆಂಗಳೂರಲ್ಲಿ ಕೊಲೆ ಮಾಡಿ ಮಂಡ್ಯದಲ್ಲಿ ಸಿಕ್ಕಿ ಬಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮಹೇಶ್ ಕೊಲೆಯಾದ ದುರ್ದೈವಿ. ಬೆಂಗಳೂರಿನ ಶಿಲ್ಪಳನ್ನ ಎಂಟು ವರ್ಷಗಳ ಹಿಂದೆ ಮದುವೆಯಾಗಿದ್ದ. ಮದುವೆಯಾದ ಬಳಿಕ ಬೆಂಗಳೂರಿನ ಕೋಣನಕುಂಟೆ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದರು. ಆದರೆ ಇದೇ ಗುರುವಾರ ಮಹೇಶ್ ನನ್ನ ಕೊಲೆ ಮಾಡಿದ್ದ ನಂತರ ಪಿಡ್ಸ್ ಬಂದು ಸಾವನ್ನಪ್ಪಿದ್ದಾನೆ ಎಂದು ಮೃತದೇಹವನ್ನ ಹುಟ್ಟೂರಿಗೆ ತೆಗೆದುಕೊಂಡು ಹೋಗಿದ್ದಾರೆ.

ಇನ್ನು, ಈ ವೇಳೆ ಅನುಮಾನಗೊಂಡು ಮೃತದೇಹ ಪರೀಕ್ಷಿಸಿದ್ದ ಮಹೇಶ್ ಪೋಷಕರು. ಮೃತ ದೇಹದ ಮೇಲೆ ಗಾಯಗಳು ಪತ್ತೆಯಾಗಿದ್ದವು. ಆಗ ಮಂಡ್ಯ ಪೊಲೀಸರಿಗೆ ಮಾಹಿತಿ ನೀಡಿದ ಪೋಷಕರು. ಈ ವೇಳೆ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ನಂತರ ಈ ಪ್ರಕರಣವನ್ನ ಕೋಣನಕುಂಟೆ ಠಾಣೆಗೆ ವರ್ಗಾಯಿಸಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

Exit mobile version