Site icon PowerTV

ಸಿದ್ದರಾಮಯ್ಯ ಅರ್ಕಾವತಿ ಯೋಜನೆಯಲ್ಲಿ ಭ್ರಷ್ಟಾಚಾರ: ಈಶ್ವರಪ್ಪ ಆರೋಪ

ಶಿವಮೊಗ್ಗ: ರಾಜ್ಯದಲ್ಲಿ ಬಿಜೆಪಿ ಜನೋತ್ಸವ ಕಾರ್ಯಕ್ರಮ ಮಾಡುತ್ತಿಲ್ಲ. ಭ್ರಷ್ಟೋತ್ಸವ ಕಾರ್ಯಕ್ರಮ ಸಿದ್ದರಾಮಯ್ಯ ಆರೋಪ ವಿಚಾರವಾಗಿ ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಮಾತನಾಡಿದ್ದಾರೆ.

ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ಅರ್ಕಾವತಿ ಯೋಜನೆಯಲ್ಲಿ ಭ್ರಷ್ಟಾಚಾರ ನಡೆದಿದೆ. ಅವರ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿಲ್ಲ ಅಂತಾ ಚಾಮುಂಡೇಶ್ವರಿ ಮೇಲೆ ಆಣೆ ಮಾಡಲಿ ಎಂದು ಈಶ್ವರಪ್ಪ ಅವರು ಸಿದ್ದರಾಮಯ್ಯ ಅವರಿಗೆ ಈಶ್ವರಪ್ಪ ಸವಾಲ್ ಹಾಕಿದರು.

ಚಾಮುಂಡೇಶ್ವರಿ ಮೇಲೆ ಪ್ರಮಾಣ ಮಾಡಿ ಹೇಳಿದ್ರೆ ಇದು ಜನೋತ್ಸವ ಅಲ್ಲ ಭ್ರಷ್ಟೋತ್ಸವ ಅಂತಾ ನಾನು ಕೂಡಾ ಒಪ್ಪಿಕೊಳ್ಳುತ್ತೇನೆ. ತಾನು ಮುಖ್ಯಮಂತ್ರಿ ಆಗಿದ್ದ ವೇಳೆ ಭ್ರಷ್ಟಾಚಾರ ಮಾಡಿಯೇ ಇಲ್ಲ ಅಂತಾ ಚಾಮುಂಡೇಶ್ವರಿ ಮೇಲೆ ಆಣೆ ಮಾಡಿ ಹೇಳಲಿ. ಬಿಜೆಪಿ ಸರ್ಕಾರ ಮಾಡುತ್ತಿರುವ ಅಭಿವೃದ್ಧಿ ಕಾರ್ಯ ನೋಡಿ ಅವರಿಗೆ ತಡೆದುಕೊಳ್ಳಲು ಆಗ್ತಿಲ್ಲ.

ಕೇಂದ್ರದಲ್ಲೂ ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಅನೇಕ ಮುಖಂಡರು ಹೊರಗೆ ಬರುತ್ತಿದ್ದಾರೆ. ರಾಜ್ಯದಲ್ಲೂ ಕೂಡಾ ಅನೇಕ ಮುಖಂಡರು ಬಿಜೆಪಿ ಸೇರುತ್ತಿದ್ದಾರೆ. ಅವರ ಪಕ್ಷವನ್ನು ಉಳಿಸಿಕೊಳ್ಳಬೇಕು ಎಂಬ ಕಾರಣಕ್ಕೆ ಬಿಜೆಪಿ ವಿರುದ್ದ ಆಪಾದನೆ ಮಾಡ್ತಿದ್ದಾರೆ ಎಂದರು.

Exit mobile version