Site icon PowerTV

ಹಿಜಾಬ್​​ ಅರ್ಜಿ ವಿಚಾರಣೆ ಸೆ.7ಕ್ಕೆ ಮುಂದೂಡಿಕೆ

ನವದೆಹಲಿ; ಶಾಲಾ, ಕಾಲೇಜುಗಳ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ಇಂದು ವಿಚಾರಣೆ ನಡೆಸಿ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 7 ಕ್ಕೆ ಮುಂದೂಡಿದೆ.

ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರನ್ನೊಳಗೊಂಡ ಪೀಠವು ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 7ಕ್ಕೆ ಮುಂದೂಡಿದೆ.

ಶಾಲಾ, ಕಾಲೇಜುಗಳ ಕ್ಯಾಂಪಸ್‌ಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಲು ಸರ್ಕಾರಿ ಕಾಲೇಜುಗಳ ಅಭಿವೃದ್ಧಿ ಸಮಿತಿಗಳಿಗೆ ಅಧಿಕಾರ ನೀಡಿದ ರಾಜ್ಯ ಸರ್ಕಾರದ ಆದೇಶವನ್ನು ಎತ್ತಿ ಹಿಡಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಕೆಲವರು ಸುಪ್ರೀಂ ಕೋರ್ಟ್​ಗೆ ಮೊರೆ ಹೋಗಿದ್ದರು.

Exit mobile version