Site icon PowerTV

ಮನನೊಂದು ನೇಗಿನಹಾಳ ಸ್ವಾಮೀಜಿ ಆತ್ಮಹತ್ಯೆ

ಬೆಳಗಾವಿ : ಮುರುಘಾ ಮಠದ ಸ್ವಾಮೀಜಿಗಳ ಲೈಂಗಿಕ ಹಗರಣ ಪ್ರಕರಣ ಭಾರಿ ವಿವಾದ ಸೃಷ್ಟಿಸಿರುವ ಬೆನ್ನಲ್ಲೇ ಇದೀಗ ಬೆಳಗಾವಿಯ ನೇಗಿನಹಾಳ ಸ್ವಾಮೀಜಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮುರುಘಾ ಮಠದ ಸ್ವಾಮೀಜಿಗಳ ಮೇಲೆ ಇರುವ ಆರೋಪದ ಬೆನ್ನಲ್ಲೇ ಇಬ್ಬರು ಮಹಿಳೆಯರು ಮಾತನಾಡಿರುವ ಆಡಿಯೋ ರಿಲೀಸ್​ ಆಗಿರುವುದೇ ಈ ಆತ್ಮಹತ್ಯೆಗೆ ಕಾರಣ. ಮುರಘಾ ಶ್ರೀಗಳ ಲೈಂಗಿಕ ಪ್ರಕರಣ ಕುರಿತು ಇಬ್ಬರು ಮಹಿಳೆಯರು ಮಾತನಾಡಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸುದ್ದಿಯಾಗುತ್ತಿದ್ದು, ಅದರ ಬೆನ್ನಲ್ಲೇ ನೇಗಿನಹಾಳದ ಬಸವಸಿದ್ದಲಿಂಗ ಸ್ವಾಮೀಜಿ ಮನನೊಂದು ನೇಣಿಗೆ ಶರಣಾಗಿದ್ದಾರೆ.

ಇನ್ನು, ಕೆಲವು ಸ್ವಾಮೀಜಿಗಳ ಲೈಂಗಿಕ ಹಗರಣದ ಕುರಿತು ಓರ್ವ ಮಹಿಳೆ ಆಡಿಯೊದಲ್ಲಿ ಹೆಸರು ಸಹಿತ ಪ್ರಸ್ತಾಪ ಮಾಡಿದ್ದಾರೆ. ಕೆಲವೊಂದು ಮಠಗಳು ಹಾಗೂ ಕೆಲವು ಸ್ವಾಮೀಜಿಗಳ ಹೆಸರನ್ನೂ ಆಕೆ ಆಡಿಯೋದಲ್ಲಿ ಹೇಳಿದ್ದಾರೆ. ಆ ಆಡಿಯೊದಲ್ಲಿ ನೇಗಿನಹಾಳ ಸ್ವಾಮೀಜಿ ಹೆಸರು ಕೂಡ ಇದೆ. ಈ ಹಿನ್ನೆಲೆಯಲ್ಲಿ ಸ್ವಾಮೀಜಿ ಮನನೊಂದುಕೊಂಡು ಇಂಥದ್ದೊಂದು ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

Exit mobile version