Site icon PowerTV

ಉಮೇಶ್​ ಕತ್ತಿ ನಿಧನಕ್ಕೆ ನಳಿನ್‍ಕುಮಾರ್ ಸಂತಾಪ

ಬೆಂಗಳೂರು: ಹಿರಿಯ ರಾಜಕೀಯ ಮುತ್ಸದ್ಧಿ, ರಾಜ್ಯದ ಸಚಿವ ಉಮೇಶ್ ಕತ್ತಿ ಅವರ ನಿಧನ ಅತ್ಯಂತ ದುರದೃಷ್ಟಕರ ಮತ್ತು ತೀವ್ರ ಆಘಾತವನ್ನುಂಟು ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.

ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳು, ಅರಣ್ಯ ಇಲಾಖೆ ಹಾಗೂ ವಿಜಯಪುರ ಉಸ್ತುವಾರಿ ಸಚಿವರಾಗಿ ಉಮೇಶ್ ಕತ್ತಿ ಅವರು ಹೊಣೆ ನಿರ್ವಹಿಸುತ್ತಿದ್ದರು. ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿ ಬಗ್ಗೆ ಅವರು ವಿಶೇಷ ಕಾಳಜಿ ಹೊಂದಿದ್ದರು. ಪಕ್ಷದ ಸಂಘಟನೆಗೆ ಹೆಚ್ಚಿನ ಶ್ರಮ ವಹಿಸಿದ್ದರು ಎಂದು ಅವರು ತಿಳಿಸಿದ್ದಾರೆ.

ಪಕ್ಷವು ಒಬ್ಬ ಕ್ರಿಯಾಶೀಲ ಮುಖಂಡ ಹಾಗೂ ನಿಷ್ಠಾವಂತ ಜನಸೇವಕನನ್ನು ಕಳೆದುಕೊಂಡಂತಾಗಿದೆ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತನು ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುವುದಾಗಿ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.

Exit mobile version