ನವದೆಹಲಿ: ಕೇರಳದ ಪತ್ರಕರ್ತ ಸಿದ್ದಿಕಿ ಕಪ್ಪನ್ ಅವರಿಗೆ ಜಾಮೀನು ಮಂಜೂರು ಮಾಡಿ ಎಂದು ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ.
ಪತ್ರಕರ್ತ ಸಿದ್ಧಿಕಿ ಕಪ್ಪನ್ ಅವರನ್ನು 2020 ರಲ್ಲಿ ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದರು, 19 ವರ್ಷದ ದಲಿತ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ನಂತರ ಹಾಥರಸ್ ಪರಿಸ್ಥಿತಿ ಕುರಿತು ವರದಿ ಮಾಡಲು ಸಿದ್ದಿಕಿ ಅವರು 2020 ರಲ್ಲಿ ತೆರಳುವ ವೇಳೆ ಉತ್ತರ ಪ್ರದೇಶ ಪೊಲೀಸರು ಅವರನ್ನು ಬಂಧಿಸಿ, ದೇಶದ್ರೋಹ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿದ್ದರು.
ಸಿದ್ದಿಕ್ ಕಪ್ಪನ್ 2020 ರಿಂದ ಜೈಲಿನಲ್ಲಿದ್ದಾರೆ. ಅವರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಆರೋಪ ಹೊರಿಸಲಾಗಿತ್ತು. ಸಿದ್ದಿಕಿ ಕಪ್ಪನ್ ಅವರಿಗೆ ಈ ಹಿಂದೆ ನ್ಯಾಯಾಲಯಗಳು ಜಾಮೀನು ನಿರಾಕರಿಸಿದ್ದವು.
ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ ಅಡಿಯಲ್ಲಿ ಉತ್ತರ ಪ್ರದೇಶ ಸರ್ಕಾರದಿಂದ ಪ್ರಕರಣ ದಾಖಲಿಸಿದ್ದ ಕೇರಳ ಪತ್ರಕರ್ತ ಸಿದ್ದಿಕ್ ಕಪ್ಪನ್ಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿ ಮಹತ್ವದ ಆದೇಶ ನೀಡಿದೆ.


