Site icon PowerTV

ಒತ್ತುವರಿ ತೆರವು ಕಾರ್ಯ, ಭೇದಭಾವದ ಪ್ರಶ್ನೆಯೇ ಇಲ್ಲ; ಸಿಎಂ ಬೊಮ್ಮಾಯಿ

ಬೆಂಗಳೂರು: ಬೆಂಗಳೂರಿನ ರಾಜಕಾಲುವೆ ಒತ್ತುವರಿ ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ಯಾವುದೇ ಭೇದಭಾವ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ರಾಜಕಾಲುವೆ ಮೇಲೆ ಕಟ್ಟಡ, ಮನೆ ಕಟ್ಟಿರುವವರು, ಯಾರು ಕಾಲುವೆ ನೀರನ್ನು ಹರಿಸಲು ತೊಂದರೆ ಮಾಡಿದ್ದಾರೆ, ಕೆಲವರು ರಾಜಕಾಲುವೆಯನ್ನು ಮುಚ್ಚಿದ್ದಾರೆ. ಮಳೆ ನೀರು ಚರಂಡಿಗೆ ಅಡ್ಡಿಯಾಗಿದ್ದರೆ, ಅವುಗಳನ್ನು ತೆರವುಗೊಳಿಸಲು ಸೂಚನೆ ನೀಡಲಾಗಿದೆ ಎಂದರು.

ಪ್ರವಾಹ ಬಂದಾಗ ಐಟಿ ಬಿಟಿಯವರು ಸೇರಿದಂತೆ ಎಲ್ಲರಿಗೂ ತೊಂದರೆಯಾಗಿದೆ, ಜನಸಾಮಾನ್ಯರು, ಕೆಳಹಂತದ ಮನೆಗಳಿಗೂ ತೊಂದರೆಯಾಗಿದೆ. ಇವುಗಳನ್ನು ತೆರೆವುಗೊಳಿಸುವ ಕಾರ್ಯವನ್ನು ಪೂರ್ಣಗೊಳಿ ಸಲಾಗುವುದು ಎಂದು ತಿಳಿಸಿದರು.

ಹಲವಾರು ಪ್ರಕರಣಗಳು ನ್ಯಾಯಾಲಯದಲ್ಲಿ ದಾಖಲಾಗಿ ನಿರ್ದೇಶನ ಪಡೆಯಲಾಗಿದೆ. ನ್ಯಾಯಾಲಯದಲ್ಲಿಯೂ ಗಂಭೀರವಾಗಿ ಇವುಗಳ ಮಾಹಿತಿಯನ್ನು ನೀಡಲಾಗುವುದು. ನ್ಯಾಯಾಲಯವೂ ಪ್ರವಾಹದ ಪ್ರಕರಣದಲ್ಲಿ ನಿರ್ದೇಶನಗಳನ್ನು ನೀಡಿದೆ. ಈ ಬಾರಿ ದೊಡ್ಡ ಪ್ರಮಾಣದಲ್ಲಿ ಅತಿಕ್ರಮಣ ತೆರೆವುಗೊಳಿಸಲಾಗುವುದು ಎಂದು ಸಿಎಂ ಹೇಳಿದರು.

Exit mobile version