Site icon PowerTV

ಬಾ.ಮಾ ಹರೀಶ್ ತಾಯಿ ಪ್ರೇಮಾ ನಿಧನ; ನಾಳೆ ಅಂತ್ಯಕ್ರಿಯೆ

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಾ.ಮಾ ಹರೀಶ್ ಅವರ ತಾಯಿ ವಯೋಸಹಜ ಕಾಯಿಲೆಯಿಂದ ಇಂದು ನಿಧನರಾಗಿದ್ದಾರೆ.

74 ವರ್ಷದ ಪ್ರೇಮ ಅವರಿಗೆ ಅನಾರೋಗ್ಯ ಹಿನ್ನಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಮಧ್ಯಾಹ್ನ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

ಪ್ರೇಮ ಅವರ ಅಂತಿಮ ದರ್ಶನಕ್ಕೆ ಬೆಂಗಳೂರಿನ ವಿಜಯನಗರದಲ್ಲಿರೋ ಬಾ.ಮಾ ಹರೀಶ್ ಅವರ ಮನೆಯಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಸ್ವಂತ ಊರು ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಆಪ್ತರು ತಿಳಿಸಿದರು.

Exit mobile version