Site icon PowerTV

ಆಟೋ ಪಲ್ಟಿ, ಇಬ್ಬರು ಸಾವು

ಬಳ್ಳಾರಿ: ಜಿಲ್ಲೆಯಲ್ಲಿ ದುರಂತ ಘಟನೆಯೊಂದು ಸಂಭವಿಸಿರುವುದು ಬೆಳಕಿಗೆ ಬಂದಿದೆ. ಕೊಳಗಲ್ ಗಾಮದಲ್ಲಿ ತುಂಗಭದ್ರ ಕೆನಾಲ್​ಗೆ 15 ರಿಂದ 20 ಜನರಿದ್ದ ಪ್ಯಾಸೆಂಜರ್ ಆಟೋ ಉರುಳಿ ಬಿದ್ದಿದ್ದು, ಇಬ್ಬರು ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.

ಗ್ರಾಮದ ತುಂಗಾಭದ್ರ ಕೆನಾಲ್ ಮೇಲೆ ಸಂಚರಿಸುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಪ್ಯಾಸೆಂಜರ್​ ಆಟೋ ಕಾಲುವೆಗೆ ಉರುಳಿ ಬಿದ್ದಿದೆ. ಆಟೋದಲ್ಲಿದ್ದ ಎಲ್ಲರೂ ಕೆನಾಲ್​ಗೆ ಬಿದ್ದಿದ್ದಾರೆ. ಈ ದುರ್ಘಟನೆಯಲ್ಲಿ ಒಬ್ಬ ಈಜಿ ದಡ ಸೇರಿದ್ದಾರೆ. ಆತನನ್ನು ಚಿಕಿತ್ಸೆಗಾಗಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರ ಮೃತ ದೇಹಗಳು ಪತ್ತೆಯಾಗಿವೆ.

ಇನ್ನು, ಸ್ಥಳಕ್ಕೆ ಗ್ರಾಮಾಂತರ ಪೋಲಿಸರು ಮತ್ತು ಅಗ್ನಿ ಶಾಮಕ ದಳ ಭೇಟಿ ನೀಡಿದ್ದು, ಸ್ಥಳೀಯರೊಂದಿಗೆ ಸಿಬ್ಬಂದಿಯರು ಶೋಧ ಕಾರ್ಯ ಕೈಗೊಂಡಿದ್ದಾರೆ. ಕಾಲುವೆ ತುಂಬಿ ಹರಿಯುತ್ತಿರುವ ಪರಿಣಾಮ ರಕ್ಷಣಾ ಕಾರ್ಯಕ್ಕೆ ಸಮಸ್ಯೆಯಾಗಿ ಪರಿಣಮಿಸಿದೆ.

Exit mobile version