Site icon PowerTV

‘ಕನ್ನಡ‌ ನಾಡಿನಲ್ಲಿ ಕನ್ನಡಕ್ಕೆ ಮೊದಲ ಪೂಜೆ : ಸಿದ್ದರಾಮಯ್ಯ

ಬೆಂಗಳೂರು : ಇಂದು ಹಿಂದಿ ದಿವಸವನ್ನು ಆಚರಿಸಲಾಗ್ತಿದೆ. ಆದ್ರೆ ರಾಜ್ಯದಲ್ಲಿ ಆಚರಣೆ ಮಾಡದಂತೆ ವಿರೋಧಗಳು ಹೆಚ್ಚಾಗುತ್ತಿದೆ. ಹಿಂದಿ ದಿವಸ್‌ಗೆ ವಿರೋಧ ವ್ಯಕ್ತಪಡಿಸಿ ಮಾಜಿ ಸಿಎಂ H.D.ಕುಮಾರಸ್ವಾಮಿ ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದ ಬೆನ್ನಲ್ಲೇ ಇದೀಗ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೂಡಾ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಕುರಿತಾಗಿ ಫೇಸ್‌ಬುಕ್‌ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ಯಾವ ಭಾಷೆಯ ಕಲಿಕೆಯನ್ನೂ ವಿರೋಧಿಸುವುದಿಲ್ಲ, ಯಾವ ಭಾಷೆಯ ಹೇರಿಕೆಯನ್ನೂ ಸಹಿಸುವುದಿಲ್ಲ. ಆದರೆ, ಕನ್ನಡ‌ ನಾಡಿನಲ್ಲಿ ಕನ್ನಡಕ್ಕೆ ಮೊದಲ ಪೂಜೆ ಎಂದು ಹೇಳಿದ್ದಾರೆ. ಬಿಜೆಪಿ ಸರ್ಕಾರ ಹಿಂದಿ ಭಾಷೆಯ ಹೆಸರಲ್ಲಿ RSS ಪ್ರಣೀತ ಹಿಂದುತ್ವ ಹೇರುವುದನ್ನು ನಾನು ಖಂಡಿಸುತ್ತೇನೆ ಎಂದರು.

ಇನ್ನು, ಕನ್ನಡ‌ ನಾಡಿನಲ್ಲಿ ಕನ್ನಡಕ್ಕೆ ಮೊದಲ ಪೂಜೆ ಎಂದಿರುವ ಅವರು ಜಯ ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ‌ ಮಾತೆ ಎಂದು ನಾಡಗೀತೆಯ ಸಾಲುಗಳನ್ನು ಉಲ್ಲೇಖಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ.

Exit mobile version