Site icon PowerTV

‘ಮೋಸ ಸಾಬೀತಾದ್ರೆ ರಾಜಕೀಯ ನಿವೃತ್ತಿಗೆ ಸಿದ್ಧ : ಹೆಚ್​​ಡಿಕೆ

ಬೆಂಗಳೂರು : ನನ್ನ ಕಾಲದಲ್ಲಿ ಬೆಂಗಳೂರು ಜನತೆಗೆ ಏನಾದರೂ ಮೋಸ ಮಾಡಿದ್ದೇನೆ ಎಂದು ಸಾಬೀತು ಮಾಡಿದ್ರೆ, ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ಇಂದು, ವಿಧಾನಸೌಧದಲ್ಲಿ ಮಾತನಾಡಿದ ಅವರು, ಮೊನ್ನೆ ಸದನದಲ್ಲಿ ಜೆಡಿಎಸ್ ಆಡಳಿತ ಅವಧಿಯಲ್ಲಿ ಒತ್ತುವರಿ ಆಗಿದೆ ಎಂದು ಹೇಳಿದ್ದಾರೆ. ನಾನು ಬೆಂಗಳೂರು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಒಂದು ವೇಳೆ ಒತ್ತುವರಿ ಆಗಿರುವುದನ್ನು ಸಾಬೀತು ಪಡಿಸಿದ್ರೆ, ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳಲು ಸಿದ್ಧ ಎಂದು ತಿಳಿಸಿದರು.

ಇನ್ನು, ಡಿ. ಕೆ. ಶಿವಕುಮಾರ್ ವಿರುದ್ಧ ಇಡಿ ತನಿಖೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಾನೊಬ್ಬ ರಾಜಕಾರಣಿ, ರೈತ, ಬ್ಯುಸಿನೆಸ್‌ಮೆನ್ ಅಂತ ಅಂದಿದ್ದಾರೆ. ನನಗೆ ನಂದೇ ಆದಂತಹ ವೃತ್ತಿಗಳಿವೆ. ನಾನು ಭ್ರಷ್ಟಾಚಾರ ಮಾಡಿಲ್ಲ. ಅದೆಲ್ಲ ಅವರೇ ಹೇಳಿದ್ದಾರೆ. ಅವರು ಭ್ರಷ್ಟಾಚಾರ ಮಾಡದೆ ಇದ್ದಲ್ಲಿ ಇಡಿ ನೋಟಿಸ್​ಗೆ ಬಹುಶಃ ಅವರು ಉತ್ತರ ಕೊಡುವ ಸಾಮರ್ಥ್ಯ ಹೊಂದಿದ್ದಾರೆ. ಆದ್ದರಿಂದ ಹೊರಗೆ ಬರೋ ವಿಶ್ವಾಸ ಅವರಿಗೆ ಇದ್ದಾಗ, ನಾನು ಅದರ ಬಗ್ಗೆ ಟೀಕೆ ಮಾಡೋಕೆ ಹೋಗಲ್ಲ ಎಂದರು.

Exit mobile version