Site icon PowerTV

‘ಮಾಧ್ಯಮದವರು ಕಾಂಗ್ರೆಸ್​ಅನ್ನು ಭ್ರಮೆಯಲ್ಲಿರಲು ಬಿಡಿ : ಪ್ರಹ್ಲಾದ ಜೋಶಿ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸುತ್ತಿರುವ ಹಿನ್ನೆಲೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಮೈಸೂರು ದಸರಾಗೆ ರಾಷ್ಟ್ರಪತಿ ಬರುತ್ತಿರುವುದು ಇದೇ ಮೊದಲು. ಮಾನ್ಯ ರಾಷ್ಟ್ರಪತಿಗಳು ದೈವಿಭಕ್ತಿ ಹೊಂದಿದ್ದಾರೆ. ಹೀಗಾಗಿ ಪೂರ್ವ ತಯಾರಿ ಬಗ್ಗೆ ಸಭೆ ನಡೆಸಲು ನಾನು ಬಂದಿದ್ದೇನೆ. ಮೈಸೂರು ಪ್ರಾಂತ್ಯದವರು ಬಹುದೊಡ್ಡ ಸಂಖ್ಯೆಯಲ್ಲಿ ರಾಷ್ಟ್ರಪತಿ ಕಾರ್ಯಕ್ರಮಕ್ಕೆ ಬನ್ನಿ ಎಂದರು.

ಇನ್ನು, ಕಾಂಗ್ರೆಸ್​ನ ಭಾರತ್​ ಜೋಡೋ ಯಾತ್ರೆ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್, ಭಾರತ್ ಜೋಡೋ ಯಾತ್ರೆಯಿಂದ ರಾಜಕೀಯ ಲಾಭವಾಗಲಿದೆ ಎಂಬ ಭ್ರಮೆಯಲ್ಲಿದ್ದಾರೆ. ಅದಕ್ಕೆ ನಾವು ಏಕೆ ಬೇಡ ಅನ್ನೋಣ..? ಕಾಂಗ್ರೆಸ್ ಅನ್ನು ಭ್ರಮೆಯಲ್ಲಿ ಇರಲು ಮಾಧ್ಯಮದವರು ಬಿಡಿ. ಇಷ್ಟು ದಿನ ಜನರನ್ನು ಭ್ರಮೆಯಲ್ಲಿಟ್ಟಿದ್ದರು. ಈಗ ಅವರು ಸ್ವತಃ ಭ್ರಮೆಯಲ್ಲಿದ್ದಾರೆ. ಕಾಂಗ್ರೆಸ್ ಏನು ಮಾಡುತ್ತಿದೆ ಎಂದು ಎಲ್ಲರಿಗೂ ಗೊತ್ತಿದೆ. ಮುಂದಿನ ಚುನಾವಣೆಗಳಲ್ಲಿ ಎಲ್ಲವೂ ಗೊತ್ತಾಗಲಿದೆ. ಕಾಂಗ್ರೆಸ್ ಎಂದಿಗೂ ದೇಶಕ್ಕಾಗಿ ವಿಚಾರ ಮಾಡಿಲ್ಲ. ನಕಲಿ ಗಾಂಧಿ ಕುಟುಂಬದವರು ಅವರ ಕುಟುಂಬದ ಬಗ್ಗೆ ಯೋಚನೆ ಮಾಡುತ್ತಾರೆ. ದೇಶದ ಬಗ್ಗೆ ಅವರಿಗೆ ಏನು ಗೊತ್ತು ಎಂದು ವಾಗ್ದಾಳಿ ನಡೆಸಿದರು.

Exit mobile version