Site icon PowerTV

ಸೆಲ್ಫಿ ಗೀಳು.. ವಿದ್ಯಾರ್ಥಿಗಳಿಬ್ಬರು ಸಾವು

ರಾಯಚೂರು : ಕಾಲುವೆಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಸೆಲ್ಫಿ ಗೀಳಿನಿಂದ ಕಾಲುವೆಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಕಲಮಲಾ ಗ್ರಾಮದ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ನಡೆದಿದೆ.

ಪಿಯುಸಿ ವಿದ್ಯಾರ್ಥಿಗಳಾದ ಸುಜಿತ್ ಹಾಗೂ ವೈಭವ್ ಮೃತರು. ಕಲಮಲಾ ಗ್ರಾಮದ ಹೊರವಲಯದ‌ ದೇವದುರ್ಗ ರಸ್ತೆ ಮಾರ್ಗದಲ್ಲಿ ಬರುವ ತುಂಗಭದ್ರಾ ಎಡದಂಡೆ ನಾಲೆಗೆ ವೀಕೆಂಡ್‌ ಎಂಜಾಯ್‌ಮೆಂಟ್‌ಗಾಗಿ ನಾಲ್ವರು ವಿದ್ಯಾರ್ಥಿಗಳ ತಂಡ ಸ್ನಾನಕ್ಕೆ ತೆರಳಿದ್ದಾರೆ. ಈ ವೇಳೆ ನಾಲೆಯಲ್ಲಿ ಸೆಲ್ಫಿ ತೆಗೆಯುವಾಗ ಸುಜಿತ್ ಹಾಗೂ ವೈಭವ್ ಮುಳುಗಿ ಮೃತಪಟ್ಟಿದ್ದಾರೆ. ಇನ್ನುಳಿದ ನಾಗೇಂದ್ರ ಹಾಗೂ ತರುಣ್ ಈಜಿ ದಡ ಸೇರಿದ್ದಾರೆ. ಇವರು ರಾಯಚೂರು ನಗರದ ವಿದ್ಯಾನಿಧಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ದ್ವಿತೀಯ ಪಿಯುಸಿಯಲ್ಲಿ ಓದುತ್ತಿದ್ದರು.

Exit mobile version