Tuesday, August 26, 2025
Google search engine
HomeUncategorizedಕರ್ನಾಟಕ ಸೇರಿದಂತೆ 10 ರಾಜ್ಯಗಳಲ್ಲಿ ಬೆಳ್ಳಂ ಬೆಳಿಗ್ಗೆ ಎನ್​ಐಎ ದಾಳಿ.!

ಕರ್ನಾಟಕ ಸೇರಿದಂತೆ 10 ರಾಜ್ಯಗಳಲ್ಲಿ ಬೆಳ್ಳಂ ಬೆಳಿಗ್ಗೆ ಎನ್​ಐಎ ದಾಳಿ.!

ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ), ಜಾರಿ ನಿರ್ದೇಶನಾಲಯ(ಇಡಿ) ಹಾಗೂ ರಾಜ್ಯ ಪೊಲೀಸ್ ಪಡೆಗಳ ಜಂಟಿಯಾಗಿ ದೇಶದ 10 ರಾಜ್ಯಗಳಲ್ಲಿ ಇಂದು ಬೆಳ್ಳಂ ಬೆಳಿಗ್ಗೆ ದಾಳಿನಡೆಸಿದೆ.

ಕರ್ನಾಟಕ, ತೆಲಂಗಾಣ, ಕೇರಳ, ಆಂಧ್ರಪ್ರದೇಶ, ಉತ್ತರ ಪ್ರದೇಶ ಸೇರಿದಂತೆ ಒಟ್ಟು 10 ರಾಜ್ಯಗಳಲ್ಲಿ 80 ಕಡೆ ಪಿಎಫ್​ಐ ಜಾಗದಲ್ಲಿ 300ಕ್ಕೂ ಎನ್​ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ 100 ಕ್ಕೂ ಹೆಚ್ಚು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ನಾಯಕರನ್ನು ಬಂಧಿಸಲಾಗಿದೆ.

ಹಿಂಸಾಚಾರ ಮತ್ತು ಕಾನೂನುಬಾಹಿರ ಚಟುವಟಿಕೆಗಳನ್ನು ಪ್ರಚೋದಿಸುವ ಆರೋಪದ ಮೇಲೆ ಈ ದಾಳಿ ನಡೆದಿದೆ. ಈ ತಿಂಗಳ ಆರಂಭದಲ್ಲಿ ಎನ್‌ಐಎ ಪಿಎಫ್‌ಐ ಪ್ರಕರಣದಲ್ಲಿ ತೆಲಂಗಾಣ, ಆಂಧ್ರಪ್ರದೇಶದ 40 ಸ್ಥಳಗಳಲ್ಲಿ ದಾಳಿ ನಡೆಸಿ ನಾಲ್ವರನ್ನು ಬಂಧಿಸಿತ್ತು.

ಭಯೋತ್ಪಾದನೆಗೆ ಸಹಕಾರಿಸದ, ತರಬೇತಿ ಶಿಬಿರಗಳನ್ನು ಆಯೋಜಿಸುವುದು, ಜನರನ್ನು ನಿಷೇಧಿತ ಸಂಘಟನೆಗಳಿಗೆ ಸೇರಲು ಪ್ರೋತ್ಸಾಹ ಮಾಡುವ ವ್ಯಕ್ತಿಗಳ ವಸತಿ ಮತ್ತು ಅಧಿಕೃತ ಕಚೇರಿಯಲ್ಲಿ ಹುಡುಕಾಟಗಳನ್ನು ನಡೆಸಲಾಗುತ್ತಿದೆ.

RELATED ARTICLES
- Advertisment -
Google search engine

Most Popular

Recent Comments