Site icon PowerTV

ಗಾಂಜಾ ದಂಧೆಕೋರರಿಂದ ಪೊಲೀಸ್ ಮೇಲೆ ಹಲ್ಲೆ

ಕಲಬುರಗಿ : ಗಾಂಜಾ ದಂಧೆಕೋರರಿಂದ ಕಲಬುರಗಿ ಜಿಲ್ಲೆ ಕಮಲಾಪುರ ಠಾಣೆ ಸಿಪಿಐ ಶ್ರೀಮಂತ್ ಇಲ್ಲಾಳ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಉಮರ್ಗಾ ತಾಲ್ಲೂಕಿನ ತರೂರಿ ಗ್ರಾಮದಲ್ಲಿ ನಡೆದಿದೆ.

ಕಲಬುರಗಿ ಗ್ರಾಮೀಣ ಠಾಣೆ ಸಿಪಿಐ ಶ್ರೀಮಂತ ಇಲ್ಲಾಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು ಸಿಪಿಐ ಶ್ರೀಮಂತ ಇಲ್ಲಾಳ ಪ್ರಜ್ಞಾಹೀನ ಸ್ಥಿತಿ ತಲುಪಿದ್ದಾರೆ. ಕಲಬುರಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಂಜಾ ಮಾರಾಟಗಾರ ಸಂತೋಷ್​ನನ್ನು ಎರಡು ದಿನದ ಹಿಂದೆ ಪೊಲೀಸರು ಬಂಧಿಸಿದ್ದರು.

ಆರೋಪಿಯ ಮಾಹಿತಿ ಮೇರೆಗೆ ಮಹಾರಾಷ್ಟ್ರದ ಉಮ್ಮರ್ಗಾ ತಾಲೂಕಿನ ತರೂರಿ ಬಳಿ ಗಾಂಜಾ ಬೆಳೆಯುತ್ತಿದ್ದ ಗ್ಯಾಂಗ್ ಪತ್ತೆ ಮಾಡಲು ಶ್ರೀಮಂತ ಇಲ್ಲಾಳ್ ಮತ್ತು ಸಿಬ್ಬಂದಿ ಹೋಗಿದ್ದರು. ಈ ವೇಳೆ ರಾತ್ರಿ ಒಂಬತ್ತು ಗಂಟೆ ಸಮಯದಲ್ಲಿ ದಿಢೀರನೆ ನಲವತ್ತು ಜನರ ತಂಡ ಸಿಪಿಐ ಶ್ರೀಮಂತ ಇಲ್ಲಾಳ ಮೇಲೆ ದಾಳಿ ಮಾಡಿದ್ದಾರೆ. ಇದರಿಂದ ಶ್ರೀಮಂತ ಇಲ್ಲಾಳ ಅವರ ಸ್ಥಿತಿ ಗಂಭೀರವಾಗಿದೆ. ಇನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ಎಸ್​​ಪಿ ಇಶಾ ಪಂತ್ ಭೇಟಿ ನೀಡಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿಪಿಐ ಶ್ರೀಮಂತ್ ಇಲ್ಲಾಳ್ ಆರೋಗ್ಯ ವಿಚಾರಿಸಿದ್ದಾರೆ.

Exit mobile version