Site icon PowerTV

ವಿರೋಧದ ನಡುವೆಯೂ ಮಹಿಷ ದಸರಾ ಆಚರಣೆ..!

ಮೈಸೂರು : ತೀವ್ರ ವಿರೋಧದ ನಡುವೆಯೂ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಮಹಿಷ ದಸರಾ ಆಚರಣೆ ಮಾಡಲಾಯಿತು.

ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಹಿಷ ದಸರಾಗೆ ಪೋಲಿಸರು ಅವಕಾಶ ನೀಡದೆ ಮಹಿಷ ಪ್ರತಿಮೆಗೆ ಬಟ್ಟೆ ಸುತ್ತಲಾಗಿತ್ತು. ಇದರಿಂದ ಮೈಸೂರಿನ ಅಶೋಕಪುರಂನಲ್ಲಿ ಮಹಿಷ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಪ್ರಗತಿಪರರು ಮಹಿಷ ದಸರಾ ಆಚರಣೆ ಮಾಡಿದರು.

ಹಿರಿಯ ಸಾಹಿತಿ ಪ್ರೊ.ಕೆ.ಎಸ್.ಭಗವಾನ್, ಪ್ರೊ.ನಂಜರಾಜ ಅರಸ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ಚಾಮುಂಡಿಬೆಟ್ಟದಲ್ಲಿ ಮಹಿಷ ದಸರಾ ಆಚರಣೆಗೆ ಅವಕಾಶ ನೀಡದ ಪೋಲಿಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Exit mobile version