Site icon PowerTV

ನನಗೆ ಯಾರು ಲಂಚ ಕೊಡಬೇಕಾಗಿಲ್ಲ; ಹೊಸ ಅಭಿಯಾನಕ್ಕೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಇತ್ತೀಚೆಗೆ ವಿವಿಧ ಇಲಾಖೆಯಲ್ಲಿ 40% ಭ್ರಷ್ಟಾಚಾರ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಬಾರೀ ಮುಖಭಂಗ ಹಿನ್ನಲೆಯಲ್ಲಿ ಇದೀಗ ರಾಜ್ಯ ಸರ್ಕಾರ ವಿಶಿಷ್ಟ ಅಭಿಯಾನ ಹಮ್ಮಿಕೊಂಡಿದೆ.

ರಾಜ್ಯ ಸರ್ಕಾರದ ಕಾರ್ಯದರ್ಶಿ ಎಂ ಮಂಜುನಾಥ್ ಪ್ರಸಾದ ಆದೇಶ ಹೊರಡಿಸಿ, ನನಗೆ ಯಾರು ಲಂಚ ಕೊಡಬೇಕಾಗಿಲ್ಲ. ನಾನು ಭ್ರಷ್ಟ ಅಧಿಕಾರಿಯಾಗಲಾರೆ ಎಂಬ ಶೀರ್ಷಿಕೆಯಡಿ ರಾಜ್ಯ ಸರ್ಕಾರ ಅಭಿಯಾನ ಅಡಿ ಆದೇಶ ಹೊರಡಿಸಿದೆ.

ನನಗೆ ಯಾರೂ ಲಂಚ ಕೊಡಬೇಕಾಗಿಲ್ಲ. ನಾನು ಭ್ರಷ್ಟ ಅಧಿಕಾರಿಯಾಗಲಾರೆ ಎಂಬ ಶೀರ್ಷಿಕೆಯ ನಾಮಫಲಕವನ್ನ ಅಳವಡಿಸಲು ಆದೇಶಿಸಲಾಗಿದ್ದು, ಇದನ್ನ ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಅಳವಡಿಸಲು ಸುತ್ತೋಲೆ ಹೊರಡಿಸಲಾಗಿದೆ.

ರಾಜ್ಯ ಸರ್ಕಾರದ ವಿರುದ್ಧ ಸರಣಿ ಭ್ರಷ್ಟಾಚಾರ ಆರೋಪ ಹಿನ್ನಲೆಯಲ್ಲಿ ಡ್ಯಾಮೇಜ್​ ಕಂಟ್ರೋಲ್​ ಮುಖ್ಯ ಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಅವರು ಅಕ್ಟೋಬರ್ 2 ರಿಂದ 20ರ ವರೆಗೆ ಭ್ರಷ್ಟಾಚಾರ ನಿರ್ಮೂಲನೆ ಅಭಿಯಾನ ಹಮ್ಮಿಕೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ.

Exit mobile version