Site icon PowerTV

ಪಕ್ಷ ಸಂಘಟಿಸಿ, ಇಲ್ಲದಿದ್ದರೆ ಹುದ್ದೆಯಿಂದ ಗೇಟ್​ ಪಾಸ್; ಸಿಎಂ ಇಬ್ರಾಹಿಂ ಎಚ್ಚರಿಕೆ

ಬೆಂಗಳೂರು: ಪಕ್ಷದ ಸಂಘಟನೆ, ಕಾರ್ಯಗಳನ್ನು ಅಲಕ್ಷ್ಯ ಮಾಡುವ ಪದಾಧಿಕಾರಿಗಳನ್ನು ಹುದ್ದೆಯಿಂದ ಕಿತ್ತು ಹಾಕುತ್ತೇನೆ ಎಂದು ಜೆಡಿಎಸ್​ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಪದಾಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಕುಮಾರಸ್ವಾಮಿ ಅವರ ಮಾತಿಗೆ ಧನಿಗೂಡಿಸಿ ಮಾತನಾಡಿದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು, ಪಕ್ಷದ ಸಂಘಟನೆ, ಕಾರ್ಯಗಳನ್ನು ಅಲಕ್ಷ್ಯ ಮಾಡುವ ಪದಾಧಿಕಾರಿಗಳನ್ನು ಮುಲಾಜಿಲ್ಲದೆ ಕಿತ್ತು ಹಾಕಲಾಗುವುದು ಎಂದು ರಾಜ್ಯ ಪದಾಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡರು.

ಪಕ್ಷಕ್ಕಾಗಿ ಕೆಲಸ ಮಾಡಿ, ಇಲ್ಲವಾದರೆ ಕೆಲಸ ಮಾಡುವವರಿಗೆ ಜಾಗ ಬಿಡಿ. ಮುಂದಿನ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ಹಾಗಾಗಿ ಎಲ್ಲರೂ ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಪಕ್ಷ ಸಂಘಟನೆಯಲ್ಲಿ ಎಲ್ಲರೂ ತೊಡಗಿಕೊಳ್ಳಬೇಕು ಎಂದರು.

ಇನ್ನು ರಾಜ್ಯ ಜೆಡಿಎಸ್​ ಪದಾಧಿಕಾರಿಗಳು ಕನಿಷ್ಠ ತಿಂಗಳಿಗೆ ಹದಿನೈದು ದಿನವಾದರೂ ರಾಜ್ಯ ಪ್ರವಾಸ ಮಾಡಬೇಕು. ಜನರು ಹಾಗೂ ಕಾರ್ಯಕರ್ತರನ್ನು ಭೇಟಿ ಮಾಡಬೇಕು ಎಂದು ಸಿಎಂ ಇಬ್ರಾಹಿಂ ತಾಕೀತು ಮಾಡಿದ್ದಾರೆ.

Exit mobile version