Site icon PowerTV

ಬಟ್ಟೆ ತೊಳೆಯಲು ಹೋಗಿದ್ದ ಒಂದೇ ಕುಟುಂಬದ ನಾಲ್ವರ ಸಾವು.!

ಬೀದರ್; ಬಟ್ಟೆ ತೊಳೆಯಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣಕ್ಕೀಡಾದ ಘಟನೆ ಬೀದರ್ ತಾಲೂಕಿನ ಕಂಗಟಿ ಗ್ರಾಮದಲ್ಲಿ ನಡೆದಿದ್ದು, ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

ಆನಂದ, ಪ್ರಜ್ವಲ್, ಸುನೀತಾ, ನಾಗೇಶ್ ಸಾವೀಗಿಡಾದವರು. ದಸರಾ ಹಬ್ಬದ ನಿಮಿತ್ಯ ಬಟ್ಟೆ ತೊಳೆಯಲು ಕೆರೆಗೆ ಹೋಗಿದ್ದ ತಾಯಿ ಮಕ್ಕಳು ಹೋಗಿದ್ದರು. ಈ ವೇಳೆ ಈ ಜಾಡಲು ಹೋಗಿ ಈ ದುರ್ಘಟನೆ ಸಂಭವಿಸಿದೆ.

ಕರೆಯಲ್ಲಿ ಬಟ್ಟೆ ಒಗೆಯುತ್ತಿದ್ದ ವೇಳೆ ಇಬ್ಬರು ಮಕ್ಕಳು ಈಜಾಡಲು ಹೋಗಿ ಇದ್ದಕ್ಕಿದ್ದ ಹಾಗೇ ಮುಣುಗುತ್ತಿರುವುದನ್ನ ಕಂಡ ಅವರನ್ನ ಉಳಿಸಲು ಹೋಗಿ ಇನ್ನಿಬ್ಬರು ನೀರಿನಲ್ಲಿ ಮುಳುಗಿದ್ದಾರೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಜನವಾಡ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

Exit mobile version