Sunday, August 24, 2025
Google search engine
HomeUncategorizedPFI-SDPI ಮುಖಂಡರ ಬಂಧನ

PFI-SDPI ಮುಖಂಡರ ಬಂಧನ

ಬೀದರ್ : ಹುಮನಾಬಾದ್ ಪಟ್ಟಣದಲ್ಲಿ ಪಿಎಫ್ಐ ಮತ್ತು ಎಸ್ಡಿಪಿಐ ಸಂಘಟನೆ ಮುಖಂಡರ ಮನೆ ಮೇಲೆ ಮಂಗಳವಾರ ಬೆಳಗಿನ ಜಾವ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.

ಪಿಎಫ್ಐ ಸಂಘಟನೆಯ ಜಿಲ್ಲಾಧ್ಯಕ್ಷ ಅಬ್ದುಲ್ ಕರೀಮ್ ಹಾಗೂ ಎಸ್ಡಿಪಿಐ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಶೇಖ್ ಮಕ್ಸೂದ್ ರನ್ನು ಪೊಲೀಸ್ ಅಧಿಕಾರಿಗಳು ಬಂಧಿಸಿದ್ದಾರೆ. ಮಂಗಳವಾರ ಬೆಳಗಿನ ಜಾವ ಸುಮಾರು 4 ಗಂಟೆಗೆ ಎರಡು ತಂಡ ರಚಿಸಿಕೊಂಡ ಅಧಿಕಾರಿಗಳು ಏಕಕಾಲಕ್ಕೆ ಮನೆಗಳ ಮೇಲೆ ದಾಳಿ ನಡೆಸಿದ್ದು, ನಂತರ ತಹಸೀಲ್ದಾರ್ ಎದುರಿಗೆ ಹಾಜರುಪಡಿಸಿ ಜೈಲಿಗೆ ಅಟ್ಟಿದ್ದಾರೆ.

ಎನ್ಐಎ ತನಿಖಾ ತಂಡ ದೇಶದ ವಿವಿಧೆಡೆ ಪಿಎಫ್ಐ ಮತ್ತು ಎಸ್ಡಿಪಿಐ ಮುಖಂಡರನ್ನು ಬಂಧಿಸಿ ವಿಚಾರಣೆ ನಡೆಸುತ್ತಿರುವುದನ್ನು ಖಂಡಿಸಿ ಸೆ.23 ರಂದು ಹುಮನಾಬಾದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಸಂದರ್ಭದಲ್ಲಿ ಪ್ರಚೋದನಕಾರಿ ಭಾಷಣ ಹಾಗೂ ಘೋಷಣೆ ಕೂಗಿದ ಹಿನ್ನಲೆಯಲ್ಲಿ ಸಂಘಟನೆಗಳ ಮುಖಂಡರ ಬಂಧನ ನಡೆದಿದೆ ಎನ್ನಲಾಗುತ್ತಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕಾ ಕಿಶೋರ್ ಬಾಬು ಅವರ ಮಾರ್ಗದರ್ಶನದಲ್ಲಿ ಎಸಿಪಿ ಶಿವಾಂಶು ರಾಜಪೂತ್, ಸಿಪಿಐ ಶರಣಬಸಪ್ಪ ಕೋಡ್ಲಾ,ಪಿಎಸ್ಐ ಮಂಜನಗೌಡಾ ಪಾಟೀಲ ಹಾಗೂ ಸಿಬ್ಬಂದಿಗಳ ಇದ್ದರು. ಮುಂಜಾಗ್ರತಾ ಕ್ರಮವಾಗಿ ಪಟ್ಟಣದಲ್ಲಿ ಎರೆಡು ಡಿಆರ್ ತಂಡ ನಿಯೋಜನೆ ಮಾಡಲಾಗಿದೆ.

RELATED ARTICLES
- Advertisment -
Google search engine

Most Popular

Recent Comments