Site icon PowerTV

ಮಂಗಳೂರಿನಲ್ಲಿ ಪೊಲೀಸರ ಭರ್ಜರಿ ಭೇಟೆ

ಮಂಗಳೂರು : ಕಳೆದ ವಾರ PFI ಮತ್ತು SDPI ಮುಖಂಡರ ಮನೆ ಹಾಗೂ ಕಚೇರಿ ಮೇಲೆ NIA ದಾಳಿ ನಡೆಸಿದ ಬೆನ್ನಲ್ಲೇ ಇಂದು ಮಂಗಳೂರು ನಗರ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಪೊಲೀಸರು PFI ಕಾರ್ಯಾಕರ್ತರ ಮನೆಗಳ ಮೇಲೆ ದಾಳಿ ಮಾಡಿ ಜಿಲ್ಲಾಧ್ಯಕ್ಷ ಸೇರಿ 14ಕ್ಕೂ ಹೆಚ್ಚು PFI ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ. ರಾಜ್ಯದಲ್ಲಿ PFI ಮುಖಂಡರ ಮೇಲೆ ರಾಜ್ಯ ಪೊಲೀಸರು ದಾಳಿ ನಡೆಸುತ್ತಿರುವ ಭಾಗವಾಗಿ ಮಂಗಳೂರಿನಲ್ಲಿಯೂ ದಾಳಿ ನಡೆದಿದೆ.

ಇನ್ನು, ರಾತ್ರೋರಾತ್ರಿ ಪೊಲೀಸರ ಭಾರಿ ಕಾರ್ಯಾಚರಣೆ ನಡೆಸಿದ್ದು, 14ಕ್ಕೂ ಅಧಿಕ PFI ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. PFI ಜಿಲ್ಲಾಧ್ಯಕ್ಷ ಇಜಾಜ್ ಅಹ್ಮದ್, ಮುಖಂಡರಾದ ಫಿರೋಜ್ ಖಾನ್, ರಾಜಿಕ್, ಮುಜಾವರ್, ನೌಫಲ್ ಸೇರಿದಂತೆ ಹಲವು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಮಂಗಳೂರಿನ ಉಳ್ಳಾಲ, ಕಾವೂರು, ಸುರತ್ಕಲ್, ಬಜಪೆ ಹಾಗೂ ಪುತ್ತೂರು ಭಾಗದಲ್ಲಿ ದಾಳಿ ನಡೆಸಲಾಗಿತ್ತು. ವಶಕ್ಕೆ ಪಡೆದುಕೊಂಡ PFI ಮುಖಂಡರನ್ನು ಪೊಲೀಸರು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ್ದಾರೆ.

Exit mobile version