Site icon PowerTV

ಪುರಿ ಜಗನ್ನಾಥ ದೇವಾಲಯಕ್ಕೆ J.P. ನಡ್ಡಾ ಭೇಟಿ

ಒಡಿಶಾ : ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಇಂದು ಒಡಿಶಾದ ಪುರಿಯಲ್ಲಿರುವ ಶ್ರೀ ಜಗನ್ನಾಥ ದೇವಸ್ಥಾನವನ್ನು ತಲುಪಿ ಜಗನ್ನಾಥನಿಗೆ ಪೂಜೆ ಸಲ್ಲಿಸಿದ್ದಾರೆ.

ಇನ್ನು, ಈ ವೇಳೆ ಕೇಂದ್ರ ಸಚಿವ ಧಮೇಂದ್ರ ಪ್ರಧಾನ್ ಕೂಡ ಜೊತೆಗಿದ್ದರು. ಇಬ್ಬರೂ ದೇವಸ್ಥಾನವನ್ನು ತಲುಪಿ ಜಗನ್ನಾಥನನ್ನು ಪೂಜಿಸಿದರು. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಪ್ರಥಮ ಬಾರಿಗೆ ಒಡಿಶಾಕ್ಕೆ ತೆರಳಿದ ನಡ್ಡಾ ಅವರಿಗೆ ಭುವನೇಶ್ವರ ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ ನೀಡಲಾಯಿತು.

ಅದಲ್ಲದೇ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಬಿಜೆಪಿ ರಾಜ್ಯಾಧ್ಯಕ್ಷ ಸಮೀರ್ ಮೊಹಾಂತಿ, ಭುವನೇಶ್ವರ ಸಂಸದ ಅಪರಾಜಿತಾ ಸಾರಂಗಿ ಮತ್ತು ಪಕ್ಷದ ಇತರ ಹಿರಿಯ ಮುಖಂಡರು ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ನಡ್ಡಾ ಬೈಕ್ ರ್ಯಾಲಿ ಬಳಿಕ ಇಲ್ಲಿನ ಪಕ್ಷದ ಕಚೇರಿಗೆ ಭೇಟಿ ನೀಡಿದರು.

Exit mobile version