Site icon PowerTV

ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟು, ಸರಳತೆ ಮೆರೆದ ಪ್ರಧಾನಿ ಮೋದಿ.!

ಗುಜರಾತ್: ಅಹಮದಾಬಾದ್‌ನಿಂದ ಗಾಂಧಿನಗರಕ್ಕೆ ತೆರಳುತ್ತಿದ್ದ ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಡಲು ಪ್ರಧಾನಿ ನರೇಂದ್ರ ಮೋದಿ ಅವರು ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟಿದ್ದಾರೆ.

ಅಹಮದಾಬಾದ್‌ನಿಂದ ಗಾಂಧಿನಗರಕ್ಕೆ ತೆರಳುತ್ತಿದ್ದ ವೇಳೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹಿಂದುಗಡೆ ಬುರತ್ತಿದ್ದ ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಡಲು ತಮ್ಮ ಬೆಂಗಾವಲು ಪಡೆಯನ್ನು ನಿಲ್ಲಿಸಿದರು. ಇದಕ್ಕೆ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳ ಮೂಲಕ ಮೋದಿ ನಡೆಗೆ ಭಾರೀ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಈ ವಿಡಿಯೋವನ್ನ ಎಎನ್​ಐ ಸುದ್ದಿಸಂಸ್ಥೆ ಹಂಚಿಕೊಂಡಿದ್ದು, ಆಂಬ್ಯುಲೆನ್ಸ್ ಹಾದುಹೋಗುವಾಗ ರಸ್ತೆ ಬದಿಯಲ್ಲಿ ಪ್ರಧಾನಿ ಮೋದಿಯವರ ಅಂಬ್ಯಲೆನ್ಸ್​ಗೆ ದಾರಿ ಮಾಡಿಕೊಟ್ಟಿರುವುದನ್ನ ಕಾನಬಹುದು.

ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಗಾಂಧಿನಗರ-ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್​ ಎಂಬ ಸೆಮಿ ಹೈಸ್ಪೀಡ್ ರೈಲಿಗೆ ಚಾಲನೆ ನೀಡಿದರು. ಬಳಿಕ ಇಂದು ಮಧ್ಯಾಹ್ನ ಅಹಮದಾಬಾದ್‌ನ ದೂರದರ್ಶನ ಕೇಂದ್ರದ ಬಳಿ ಸಾರ್ವಜನಿಕ ರ್‍ಯಾಲಿ ಮುಗಿಸಿ ಗಾಂಧಿನಗರದ ರಾಜಭವನಕ್ಕೆ ಮೋದಿ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.

ಅಹಮದಾಬಾದ್‌ನಿಂದ ಗಾಂಧಿನಗರಕ್ಕೆ ಹೋಗುವ ಮಾರ್ಗದಲ್ಲಿ ಪ್ರಧಾನಿ ಮೋದಿಯವರ ಬೆಂಗಾವಲು ಪಡೆ ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಡಲು ನಿಲ್ಲಿಸಿತು ಎಂದು ಗುಜರಾತ್ ಬಿಜೆಪಿ ಹೇಳಿಕೆಯಲ್ಲಿ ತಿಳಿಸಿದೆ.

Exit mobile version