Thursday, September 11, 2025
HomeUncategorized‘ದಳಪತಿ’ ವರ್ಸಸ್‌ ‘ಸೈನಿಕ’ ಮೆಗಾ ಫೈಟ್‌

‘ದಳಪತಿ’ ವರ್ಸಸ್‌ ‘ಸೈನಿಕ’ ಮೆಗಾ ಫೈಟ್‌

ರಾಮನಗರ : ಚನ್ನಪಟ್ಟಣದಲ್ಲಿ ಅಭಿವೃದ್ದಿ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ರಾಜಕೀಯ ಜೋರಾಗಿದೆ.

ಬೈರಾಪಟ್ಟಣ ಗ್ರಾಮದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವಿನ ಗಲಾಟೆ ವಿಕೋಪಕ್ಕೆ ತೆರಳಿದ್ದು, ಸಿ ಪಿ ಯೋಗೇಶ್ವರ್ ಮೇಲೆ ಮೊಟ್ಟೆ ಹಾಗೂ ಕಲ್ಲನ್ನು ಜೆಡಿಎಸ್ ಕಾರ್ಯಕರ್ತರು ಎಸೆದಿದ್ದಾರೆ. ಇದನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್​ ನಡೆಸಿದ್ದಾರೆ.

ಇನ್ನು, ಕುಮಾರಸ್ವಾಮಿ ದೂರವಿಟ್ಟು ಶಂಕುಸ್ಥಾಪನೆ ನೆರವೇರಿಸಿದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. 40% ಸರ್ಕಾರ, ಯಾರಪ್ಪ ಗಂಡಸು ಎಂದು ಘೋಷಣೆ ಕೂಗಿದ್ದಾರೆ. ಜೆಡಿಎಸ್ ಕಾರ್ಯಕರ್ತರು ಯೋಗೇಶ್ವರ್, ಅಶ್ವತ್ಥ್ ನಾರಾಯಣ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ. ಈ ವೇಳೆ ಕೆಲ ಜೆಡಿಎಸ್ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದ್ರು. ಶ್ವತ್ಥ್ ನಾರಾಯಣ್ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ಸದನದಲ್ಲಿ ಗುಡುಗಿದ ಬೆನ್ನಲ್ಲಿ ಸಚಿವ ಅಶ್ವತ್ಥ್ ನಾರಾಯಣ್ ಶಂಕುಸ್ಥಾಪನೆಗೆ ಮುಂದಾಗಿದ್ರು. ಆದ್ರೆ ಈಗ ಅವರೇ ಗೈರಾಗಿದ್ದಾರೆ. ಹಾಗೂ ಹೆಚ್​ಡಿ ಕುಮಾರಸ್ವಾಮಿ ಅವರನ್ನ ಭೂಮಿ‌ಪೂಜೆಯಿಂದ ಹೊರಗಿಟ್ಟಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments